ಉಡುಪಿ ಜಿಲ್ಲಾಧಿಕಾರಿಗಳಿಂದ ಐಕ್ಯತಾ ಪ್ರಮಾಣ ವಚನ ಬೋಧನೆ

Upayuktha
0

ಉಡುಪಿ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಅವರು ನವೆಂಬರ್ 19ರಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.  


ದೇಶದ ಸ್ವಾತಂತ್ರ್ಯ ಮತ್ತು ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟಲು ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಸಪ್ತಾಹದ ಅಂಗವಾಗಿ ನವೆಂಬರ್ 19 ರಿಂದ 25ರ ವರೆಗೆ ವಿವಿಧ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.  


ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತಮ್ಮ ಇಲಾಖೆಗಳಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಮತ್ತು ದೇಶಕ್ಕಾಗಿ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರು ಯಾವುದೇ ರೀತಿಯ ಭಿನ್ನಾಭಿಪ್ರಾಯ ಮತ್ತು ವಿವಾದಗಳನ್ನು ಶಾಂತ ರೀತಿಯಲ್ಲಿ, ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.


ಕಾರ‍್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top