ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲು ನ.30 ರವರೆಗೆ ಕಾಲಾವಕಾಶ

Upayuktha
0

ಮಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದವರ ಇ-ಕೆವೈಸಿಗಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಮರು ಸಂಗ್ರಹಿಸಲು ಇದೇ ನ.30ವರೆಗೆ ಕಾಲಾವಕಾಶ ನೀಡಲಾಗಿದೆ.


ಪಡಿತರ ಚೀಟಿಯಲ್ಲಿ 5 ಹಾಗೂ 15 ವರ್ಷ ತುಂಬಿದ ಮಕ್ಕಳ ಜೀವಮಾಪನವನ್ನು ಆಧಾರ್ ನಲ್ಲಿ ನಮೂದಿಸಿದ ನಂತರ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಬೇಕು. ಇ-ಕೆವೈಸಿ ಮಾಡದಂತಹ ಪಡಿತರ ಚೀಟಿದಾರರ ಹೆಸರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು. ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಒಂದು ವೇಳೆ ಪಡಿತರ ಚೀಟಿ ಸದಸ್ಯರ ಇ-ಕೆವೈಸಿಗೆ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು. 


ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿಲ್ಲ. ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಪಡಿತರ ಪಡೆಯುವುದರಿಂದ ವಂಚಿತರಾಗದಂತೆ ಇದರ ಪ್ರಯೋಜನ ಪಡೆಯಲು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top