ಉಡುಪಿ: 2019-20 ನೇ ಸಾಲಿನ ದಿನಾಂಕ 11. 11. 2020ರ ಅಧಿಸೂಚನೆಯಂತೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗಳನ್ನು 7%ಕ್ಕೆ ಮಿತಿಗೊಳಿಸಿ ಗಣಕೀಕೃತ ನಡೆಸುವ ಬಗ್ಗೆ ಸಹಿತ ವರ್ಗಾವಣೆ ವೇಳಾಪಟ್ಟಿಯನ್ನು ಜಿಲ್ಲೆಯೊಳಗೆ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಗೆ ಸಂಬಂಧಿಸಿದಂತೆ ಈ ಕೆಳಕಂಡ ದಿನಾಂಕಗಳಂದು ಪ್ರಾಥಮಿಕ ಮತ್ತು ಪ್ರೌಢಶಾಲಾ (ಮುಖ್ಯ ಶಿಕ್ಷಕರು, ಸಹಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು) ಕೌನ್ಸಲಿಂಗ್ ಪ್ರಕ್ರಿಯೆಯು ಸವ್ಯಸಾಚಿ ಸಭಾಂಗಣ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಉಡುಪಿ ಇಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಅದರಂತೆ ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಎಲ್ಲಾ ಶಿಕ್ಷಕರು ನಿಗದಿಪಡಿಸಿದ ವೇಳಾಪಟ್ಟಿಯಂತೆ ಕೌನ್ಸೆಲಿಂಗ್ ಗೆ ಹಾಜರಾಗುವಂತೆ ಹಾಗೂ ಆದ್ಯತೆ ಮೇರೆಗೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳು ಸಂಬಂಧಿಸಿದ ಮೂಲ ದಾಖಲೆಗಳೊಂದಿಗೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗೆ ಆಯಾಯ ಸಂಬಂಧಪಟ್ಟ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಉಡುಪಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಉಪ ನಿರ್ದೇಶಕರು (ಆಡಳಿತ) ತಿಳಿಸಿರುತ್ತಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ

