ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಪ್ರತಿವರ್ಷ ನಡೆಸುವ ಅಂತಾರಾಷ್ಟ್ರೀಯ ಮಟ್ಟದ ಕಾನ್ಫರೆನ್ಸ್ 'ಐಸಿಇಟಿಇ' ನ್ನು ನವೆಂಬರ್ 19 ಮತ್ತು 20 ರಂದು ನಿಟ್ಟೆ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. ಈ ಬಾರಿ 4 ವಿವಿಧ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಮಲ್ಟಿ-ಕಾನ್ಫರೆನ್ಸ್ ಅನ್ನು ಕಾಲೇಜು ಆಯೋಜಿಸಿದೆ.
ಬಯೋಟೆಕ್ನಾಲಜಿ ವಿಭಾಗದ ವತಿಯಿಂದ 'ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ನರ್ಚರಿಂಗ್ ಇನ್ನೋವೇಟಿವ್ ಟೆಕ್ನಾಲಾಜಿಕಲ್ ಟ್ರೆಂಡ್ಸ್ ಇನ್ ಇಂಜಿನಿಯರಿಂಗ್- ಬಯೋಸೈನ್ಸ್' ಎಂಬ ಕಾನ್ಫರೆನ್ಸ್ ಅನ್ನು ಹಮ್ಮಿಕೊಳ್ಳಲಾಗಿದೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ 'ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಆನ್ ಸಿವಿಲ್ ಇಂಜಿನಿಯರಿಂಗ್ ಟ್ರೆಂಡ್ಸ್ ಆ್ಯಂಡ್ ಚ್ಯಾಲೆಂಜಸ್ ಫಾರ್ ಸಸ್ಟೈನೆಬಿಲಿಟಿ' ಎಂಬ ಕಾನ್ಫರೆನ್ಸ್, ಮೆಕ್ಯಾನಿಕಲ್ ವಿಭಾಗವು 'ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಆನ್ ಸ್ಮಾರ್ಟ್ ಆ್ಯಂಡ್ ಸಸ್ಟೈನೆಬಲ್ ಡೆವಲಪ್‌ಮೆಂಟ್ ಇನ್ ಮೆಟೀರಿಯಲ್ಸ್, ಮ್ಯಾನುಫ್ಯಾಕ್ಚರಿಂಗ್ ಆಂಡ್ ಎನರ್ಜಿ ಇಂಜಿನಿಯರಿಂಗ್' ಹಾಗೂ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಭಾಗವು 'ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಆನ್ ಮೆಟೀರಿಯಲ್ಸ್ ಸೈನ್ಸ್ ಆಂಡ್ ಮ್ಯಾತಮೆಟಿಕ್ಸ್ ಫಾರ್ ಎಡ್ವಾನ್ಸ್ಡ್ ಟೆಕ್ನಾಲಜಿ' ಎಂಬ ವಿವಿಧ ವಿಷಯಗಳ ಬಗೆಗೆ ಕಾನ್ಫರೆನ್ಸ್ ಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಮಲ್ಟಿ ಕಾನ್ಫರೆನ್ಸ್ ಅನ್ನು ಹೈದರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಂಪ್ಯೂಟರ್ & ಇನ್ಫೋರ್ಮೇಶನ್ ಸೈನ್ಸಸ್‌ನ ಪ್ರಾಧ್ಯಾಪಕ ಡಾ. ಸಿಬಾ ಕೆ ಉದ್ಗತ ಉದ್ಘಾಟಿಸಲಿರುವರು. ಈ ಎರಡು ದಿನಗಳ ಕಾನ್ಫರೆನ್ಸ್ ನ ಅವಧಿಯಲ್ಲಿ 16 ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರುವಾಸಿಯಾದ ವಿವಿಧ ವಿಭಾಗಗಳ ಸಾಧಕರಿಂದ ದಿಕ್ಸೂಚಿ ಭಾಷಣಗಳನ್ನೂ ಹಮ್ಮಿಕೊಳ್ಳಲಾಗಿದೆ.
ಈ ಕಾನ್ಫರೆನ್ಸ್‌ನಲ್ಲಿ ಸುಮಾರು 450 ಮಂದಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಂದ ಸಂಶೋಧನಾ ಪ್ರಬಂಧಗಳ ಮಂಡನೆಯೂ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ