ಉಡುಪಿಯಲ್ಲಿ ಪುಟಾಣಿ ಮಕ್ಕಳಿಗೆ ಚಾಕೋಲೇಟ್, ಬಲೂನು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Upayuktha
0

ಉಡುಪಿಸುಮಾರು ಒಂದೂವರೆ ವರ್ಷಗಳ ನಂತರ ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ ಸ್ವಾಗತಿಸಿದರುಉಡುಪಿ ನಗರಸಭಾ ವ್ಯಾಪ್ತಿಯ ಕಡಿಯಾಳಿ ಅಂಗನವಾಡಿ ಕೇಂದ್ರದಲ್ಲಿ ಬಲೂನು, ತಳಿರು ತೋರಣಗಳಿಂದ ಸಿದ್ಧಪಡಿಸಿದ್ದ ಅಂಗನವಾಡಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭಾಗವಹಿಸಿದ್ದರು.


ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಆಗಮನಕ್ಕೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು, ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಮಕ್ಕಳು ಮತ್ತು ಪೋಷಕರು ಕೇಂದ್ರಕ್ಕೆ ಉತ್ಸಾಹದಿಂದ ಆಗಮಿಸುತ್ತಿದ್ದು, ಸ್ಥಳೀಯರಿಂದ ಉತ್ತಮ ಸಹಕಾರ ದೊರೆತಿದ್ದುಇಂದು ಜಿಲ್ಲೆಯ  ಎಲ್ಲಾ 1191 ಅಂಗನವಾಡಿಗಳು ಆರಂಭಗೊಂಡಿದ್ದು, ಎಲ್ಲಾ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದ್ದುಪೋಷಕರು ಯಾವುದೇ ಆತಂಕವಿಲ್ಲದೇ ಪ್ರತಿದಿನ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸುವಂತೆ ಹೇಳಿದರು.


ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಗೀತಾ ಶೇಟ್, ಬಾಲ ವಿಕಾಸ ಸಮಿತಿಯ ಸದಸ್ಯರು, ಪೋಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿಆಶಾ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರುಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಮಲತಾ ವಂದಿಸಿದರು.


ಕಾಜಾರಾಗುತ್ತುನಲ್ಲಿ ಆರತಿ ಬೆಳಗಿ ಸ್ವಾಗತಕಾಜಾರಗುತ್ತು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಆರತಿ ಬೆಳಗುವುದರ ಮೂಲಕ ಮತ್ತು ಪುಷ್ಪವೃಷ್ಠಿ ಸುರಿಸುವುದರ ಮೂಲಕ ನಲ್ಮೆಯ ಸ್ವಾಗತ ಕೋರಲಾಯಿತುಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ, ಕೋಡಿಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಆಶಾ ಶೆಟ್ಟಿ, ಉಪಾಧ್ಯಕ್ಷ ಸದಾನಂದ ಪ್ರಭು, ಪಿಡಿಓ ರೇವತಿ, ಗ್ರಾ.ಪಂ. ಸದಸ್ಯರು, ಬಾಲ ವಿಕಾಸ ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. 


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top