ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

Upayuktha
0

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 27 ರಂದು ಬೆಳಗ್ಗೆ 9.30 ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಲಿದ್ದು, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಭಾಗವಹಿಸಲಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top