ಉಡುಪಿಯ ಗ್ರಾಮೀಣ ಪ್ರದೇಶಗಳಲ್ಲಿ “ಗ್ರಾಮ ಒನ್” ಕೇಂದ್ರ ಆರಂಭ

Upayuktha
0

 


ಉಡುಪಿ: ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ “ಗ್ರಾಮ ಒನ್” ಆರಂಭವಾಗಲಿದೆ. "ಗ್ರಾಮ ಒನ್" ಯೋಜನೆಯನ್ನು ರಾಜ್ಯದ 12 ಜಿಲ್ಲೆಗಳಲ್ಲಿ ಅನುಷ್ಠಾನ ಮಾಡುವ ಸಂಬಂಧ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ತಯಾರಿ ನಡೆಸಿದೆ. ಅದರಂತೆ ಉಡುಪಿ ಜಿಲ್ಲೆಯ ನಗರ ಪ್ರದೇಶ ಹೊರತುಪಡಿಸಿ, ಉಳಿದ ಗ್ರಾಮಗಳಲ್ಲಿ ಪ್ರಾಂಚೈಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ.


ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯಡಿಯಲ್ಲಿ ಸುಮಾರು 400ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಈ ಕೇಂದ್ರಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಜಿಲ್ಲೆಗಳ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ "ಗ್ರಾಮ ಒನ್" ಆರಂಭಿಸಲು ಉದ್ದೇಶಿಸಿದ್ದು, ಪ್ರಾಂಚೈಸಿಗಳನ್ನು ಆಹ್ವಾನಿಸಲಾಗಿದೆ.


ಆಸಕ್ತರು ನವೆಂಬರ್ 11ರ ಒಳಗೆ  (https://www.karnatakaone.gov.in/Public/GramOneFranchiseeTerms) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನವೀನ್ ಕುಮಾರ್, ಜಿಲ್ಲಾ ಸಮಾಲೋಚಕರು, ಮೊ.81054 67854 ಇವರನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top