ಪಡಂಗಡಿ ಭೋಜರಾಜ ಹೆಗ್ಡೆಯವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0

ಬೆಳ್ತಂಗಡಿ: ಪಡಂಗಡಿಯ ಭೋಜರಾಜ ಹೆಗ್ಡೆಯವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಇವರು ಬೆಳ್ತಂಗಡಿ ತಾಲೂಕಿನ ಜನರೊಂದಿಗೆ ಬೆರೆತು ಸದಾ ಜನಹಿತವನ್ನು ಬಯಸುತ್ತಿದ್ದರು. 90ರ ವಯಸ್ಸಿನ ನಂತರವೂ ತಾಲೂಕಿನ ಎಲ್ಲಾ ಕಾರ‍್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಾ ಜನರನ್ನು ಪ್ರೆರೇಪಿಸುತ್ತಿದ್ದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಎಲ್ಲಾ ಕಾರ‍್ಯಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರೋತ್ಸಾಹಿಸುತ್ತಿದ್ದರು. ಅವರಂತಹ ಹಿರಿಯರನ್ನು ಕಳೆದುಕೊಂಡ ತಾಲೂಕು ಬಡವಾಗಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಶ್ರೀ ಮಂಜುನಾಥ ಸ್ವಾಮಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top