ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಆದರ್ಶ ಫ್ರೆಂಡ್ಸ್ ಅಸೋಸಿಯೇಷನ್, ಮಹಿಳಾ ಸ್ವಸಹಾಯ ಸಂಘಗಳು, ಆದರ್ಶ ನಗರದ ಸಂಯುಕ್ತಾಶ್ರಯದಲ್ಲಿ ಇದೇ ನ.18ರ ಗುರುವಾರ ಬೆಳಿಗ್ಗೆ 10.30ಕ್ಕೆ ಚಿಲಿಂಬಿಯ ಆದರ್ಶ ನಗರದಲ್ಲಿ ವಿಶ್ವ ಮಧುಮೇಹ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಆದರ್ಶ ಫ್ರೆಂಡ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ಕಿಶೋರ್ ಕೋಟ್ಯಾನ್, ಮಹಿಳಾ ಉಪಾಧ್ಯಕ್ಷೆ ರಮೀಳಾ ಕೊಟ್ಯಾನ್, ಮಹಿಳಾ ಸ್ವಸಹಾಯ ಸಂಘದ ಸಂಯೋಜಕಿ ಅಜಿತ ವಸಂತ್, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಸಾಮಾಜಿಕ ಕಾರ್ಯಕರ್ತೆ ಮಂಜುಳ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎ.ಜೆ. ಆಸ್ಪತ್ರೆಯ ತಜ್ಞ ವೈದ್ಯ ಡಾ. ಇ.ವಿ. ಸುರಂಜನ್ ಮೆಬಿನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ. ಮಂಗಳೂರು ತಾಲೂಕು ಆರೋಗ್ಯಧಿಕಾರಿ ಡಾ. ಸುಜಯ್, ಲೇಡಿಹಿಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಶ್ರೀ, ಎನ್.ಪಿ.ಸಿ.ಡಿ.ಸಿ.ಎಸ್.ನ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ಸಬಾ ಶರಾಫ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಭಾಗವಹಿಸಲಿದ್ದಾರೆ.