ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Chandrashekhara Kulamarva
0




ಮಂಗಳೂರು:
ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ (ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಮತ್ತು ಸಿಖ್) ಸಮುದಾಯದ ಬಿ.ಎಡ್ ಮತ್ತು ಡಿ.ಎಡ್‌ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ನವೆಂಬರ್ 21ರವರೆಗೆ ವಿಸ್ತರಿಸಲಾಗಿದೆ.


ಅರ್ಜಿಯನ್ನುಇಲಾಖಾ ವೆಬ್‌ಸೈಟ್ (https://dom.karnataka.gov.in/dakshina_kannada/public) ಲಿಂಕ್ ಮೂಲಕ ಗೂಗಲ್ ಫಾರ್ಮ್ ಭರ್ತಿ ಮಾಡಿ ಅರ್ಜಿಯ ಜತೆ ದೃಢೀಕೃತ ದಾಖಲಾತಿಗಳನ್ನು ಮಂಗಳೂರಿನ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಮೌಲಾನಾ ಆಝಾದ್ ಭವನದಲ್ಲಿರುವ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top