ಸತತ ಪ್ರಯತ್ನ, ಕೌಶಲ್ಯ ವೃದ್ಧಿ ಯಶಸ್ಸಿಗೆ ಅನಿವಾರ್ಯ: ಇಂದುರಾವ್

Upayuktha
0



ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮತ್ತು ತರಬೇತಿ ಕೇಂದ್ರ, ಹಾಗೂ ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ವತಿಯಿಂದ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಮತ್ತು ಭಾನುವಾರ ಬ್ರೈನ್ ಸ್ಟಾರ್ಮಿಂಗ್ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಇನ್ಫೋಸಿಸ್‌ನ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿ ಇಂದು ರಾವ್, ಉದ್ಯೋಗ ಪಡೆಯಬೇಕಾದಾಕ ಎದುರಿಸಬೇಕಾಗುವ ವಿವಿಧ ರೀತಿಯ ಸಂದರ್ಶನಗಳ ಸವಾಲುಗಳು, ಬೇಕಾದ ಅಗತ್ಯ ತಯಾರಿಯ ಬಗ್ಗೆ ಆಳವಾದ ಮಾಹಿತಿ ನೀಡಿದರು.  ನಿರಂತರ ಕೌಶಲ್ಯ ವೃದ್ಧಿ, ವೃತ್ತಿಪರತೆ, ನಾಯಕತ್ವ ಗುಣ ಬಳಸಿಕೊಂಡು ಸಂಸ್ಥೆಗೆ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡಿ ಯಶಸ್ವಿಯಾಗುವುದು ಹೇಗೆ ಎಂದು ಉದಾಹರಣೆಗಳೊಂದಿಗೆ ವಿವರಿಸಿದರು.


ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗ ನಿರ್ದೇಶಕಿ ಡಾ. ಮಂಜುಳಾ ಶಾಂತಾರಾಂ ಹಾಗೂ ಎನ್ಎಸ್ಎಸ್ ಅಧಿಕಾರಿ ಪ್ರೊ. ನಾಗರತ್ನ ಮೊದಲಾದವರು, ಆಸಕ್ತ ವಿದ್ಯಾರ್ಥಿಗಳಿಗೆ ಅಣಕು ಸಂದರ್ಶನ ನಡೆಸಿದರು. ವಿದ್ಯಾರ್ಥಿಗಳೊಂದಿಗೆ ನಡೆದ ನೇರ ಸಂವಾದ ಗಮನ ಸೆಳೆಯಿತು.


ಎರಡು ದಿನಗಳಲ್ಲಿ ವಿವಿಧ ಕಾಲೇಜುಗಳ ನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ನಿರ್ದೇಶಕ ಪ್ರೊ. ಜಯಪ್ಪ, ಉದ್ಯೋಗ ಮತ್ತು ತರಬೇತಿ ಕೇಂದ್ರದ ಸಲಹೆಗಾರ್ತಿ ಶಾರದಾ ಸೋಮಯಾಜಿ, ಕಾರ್ಯಕ್ರಮ ಸಂಘಟಕ ರುಕ್ಮಾಂಗದ ಡಿ ವಿದ್ಯಾರ್ಥಿಗಳಿಗೆ ಉಪಯುಕ್ತ ಸಲಹೆ ನೀಡಿದರು.


ಪ್ರಾಂಶುಪಾಲೆ ಡಾ. ಅನುಸೂಯ ರೈ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಸುರೇಶ್, ಡಾ. ಗಾಯತ್ರಿ ಎನ್, ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ವೀರಭದ್ರಪ್ಪ ಮೊದಲಾದವರು ಉಪಸ್ಥಿತರಿದ್ದರು. ಕಾಲೇಜಿನ ಎನ್ಎಸ್ಎಸ್ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸಿದರು. 


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top