ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನಗಳ 89ನೇ ಅಧಿವೇಶನ

Upayuktha
0

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ 29 ರಿಂದ ಡಿ. 4ರ ವರೆಗೆ ನಡೆಯಲಿವೆ. ಡಿ. 3 ರಂದು ಶುಕ್ರವಾರ ಲಕ್ಷ ದೀಪೋತ್ಸವ ನಡೆಯುತ್ತದೆ. ಭರದಿಂದ ಸಿದ್ಧತೆಗಳು ನಡೆಯುತ್ತಿದೆ.


ಡಿ. 2 ರಂದು ಗುರುವಾರ ಸಂಜೆ 5 ಗಂಟೆಗೆ ಅಮೃತ ವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್‌ಗೆ ಹ್ಲೋಟ್‌ ಉದ್ಘಾಟಿಸುವರು. ಬೆಂಗಳೂರಿನ ಎಸ್. ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸುವರು.


ಸಾಗರದ ಖ್ಯಾತ ಸಾಹಿತಿ ಸಫ್ರಾಜ್‌ ಚಂದ್ರಗುತ್ತಿ, ಮೈಸೂರು ವಿ.ವಿ.ಯ ನಿವೃತ್ತ ಪ್ರಾಧ್ಯಾಪಕಿ ಡಾ.ಎಂ.ಎಸ್. ಪದ್ಮ ಮತ್ತು ಶಿವಮೊಗ್ಗ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ.ಮೊರಾಸ್‌ ಧಾರ್ಮಿಕ ಉಪನ್ಯಾಸ ನೀಡುವರು. ನ. 3 ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಉದ್ಘಾಟಿಸುವರು.


ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್‌ ಅಧ್ಯಕ್ಷತೆ ವಹಿಸುವರು. ಸಾಗರದ ಖ್ಯಾತ ಸಾಹಿತಿ ಡಾ. ಪಿ. ಗಜಾನನ ಶರ್ಮ, ಚಿತ್ರದುರ್ಗದ ಡಾ. ಪಿ. ಚಂದ್ರಿಕಾ ಮತ್ತು ಬೆಂಗಳೂರಿನ ಡಾ.ಕೆ.ಪಿ.ಪುತ್ತೂರಾಯ ಉಪನ್ಯಾಸ ನೀಡುವರು.

 

ಉತ್ಸವಗಳು: ಪ್ರತಿ ದಿನ ರಾತ್ರಿ 9 ಗಂಟೆಯಿಂದ ಉತ್ಸವಗಳು ನಡೆಯಲಿವೆ.


ನ. 29 ಸೋಮವಾರ: ಹೊಸಕಟ್ಟೆ ಉತ್ಸವ, ನ.30: ಮಂಗಳವಾರ: ಕೆರೆಕಟ್ಟೆ ಉತ್ಸವ, ಡಿ.1: ಬುಧವಾರ: ಲಲಿತೋದ್ಯಾನ ಉತ್ಸವ, ಡಿ. 2: ಗುರುವಾರ: ಕಂಚಿಮಾರು ಕಟ್ಟೆ ಉತ್ಸವ, ಡಿ.3, ಶುಕ್ರವಾರ: ಗೌರಿಮಾರು ಕಟ್ಟೆ ಉತ್ಸವ, ಲಕ್ಷ ದೀಪೋತ್ಸವ, ಡಿ. 4: ಶನಿವಾರ: ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳುತ್ತವೆ.


ಸಾಂಸ್ಕೃತಿಕ ಕಾರ್ಯಕ್ರಮಗಳು: (ಅಮೃತವರ್ಷಿಣಿ ಸಭಾ ಭವನದಲ್ಲಿ)


ಡಿ. 1, ಬುಧವಾರ: ಬೆಂಗಳೂರಿನ ಡಾ. ಪದ್ಮಿನಿ ಮತ್ತು ಬಳಗದವರಿಂದ ಗಾಯನ, ಮತ್ತು ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ ಕಲಾವಿದರಿಂದ ನೃತ್ಯರೂಪಕ.


ಡಿ.2, ಗುರುವಾರ: ತ್ರಿಶೂರ್‌ನ ಶ್ರೀಕೃಷ್ಣ ಮೋಹನ್ ಮತ್ತು ಶ್ರೀ ರಾಮ್‌ಕುಮಾರ್ ಮೋಹನ್ ಬಳಗದವರಿಂದ ಶಾಸ್ತ್ರೀಯ ಸಂಗೀತ ಮತ್ತು ಮಂಗಳೂರಿನ ಸನಾತನ ನಾಟ್ಯಾಲಯ ಕಲಾವಿದರಿಂದ ನುಡಿನಾದ ನಾಟ್ಯಾಮೃತ.


ಡಿ.3: ಶುಕ್ರವಾರ ಬೆಂಗಳೂರಿನ ಮಂಜುಳಾ ಪರಮೇಶ್ ನಿರ್ದೇಶನದಲ್ಲಿ ನೃತ್ಯ ಸಂಭ್ರಮ ಹಾಗೂ ಶ್ವೇತಾ ದೇವನಹಳ್ಳಿ ಮತ್ತು ತಂಡದವರಿಂದ ಗಾನ ಲಹರಿ ನಡೆಯಲಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top