||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೇತ್ರ ತಪಾಸಣೆ ಶಿಬಿರ

ನೇತ್ರ ತಪಾಸಣೆ ಶಿಬಿರಮಂಗಳೂರು: ದಿನಾಂಕ 07-11-2021ನೇ ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್ ಮಂಗಳೂರು ಇಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಮಂಗಳಾ ಅರೆ ವೈದ್ಯಕೀಯ ಕಾಲೇಜು, ಅಪ್ಟೊಮೆಟ್ರಿ ಇವರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ಮಂಗಳೂರು ಇವರ ಸಹಭಾಗತ್ವದಲ್ಲಿ ನೇತ್ರ ತಪಾಸಣೆ ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. Upayuktha 


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳಾ ಸಮೂಹ ವಿದ್ಯಾಸಂಸ್ಥೆಯ ಛೇರ್‌ಮನ್ ಡಾ|| ಗಣಪತಿ ಪಿ ಇವರು ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್‌ನ ಗವರ್ನರ್ ಲಯನ್ ವಸಂತ್ ಕುಮಾರ್ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷರು ಲಯನ್ ಶ್ರೀ ಬಿ.ಸತೀಶ್ ರೈ, ಮಂಗಳಾ ಅರೆ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲೆ ಪ್ರತಿಜ್ಞಾ ಸುಹಾಸಿನಿ,  ಡಾ|| ಶ್ರೀಪತಿ ಕಾಮತ್ ನೇತ್ರ ತಜ್ಞರು, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಇವರು ಆಗಮಿಸಲಿದ್ದಾರೆ.  


ಈ ಕಾರ್ಯಕ್ರಮದಲ್ಲಿ ಎಲ್ಲಾ ಘಟಕದ ಗೃಹರಕ್ಷಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಕಣ್ಣಿನ ಪರೀಕ್ಷೆ ಮಾಡಲಾಗುವುದು ಹಾಗೂ ಅಗತ್ಯ ಇರುವವರಿಗೆ ಉಚಿತ ಕನ್ನಡಕ ವಿತರಿಸಲಾಗುವುದು. ಭಾಗವಹಿಸಿದ ಎಲ್ಲರಿಗೂ ಬೆಳಿಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ಇದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 (ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ
 

0 Comments

Post a Comment

Post a Comment (0)

Previous Post Next Post