|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿ ದೆಸೆಯಲ್ಲೇ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಿ: ಡಾ. ಕುಮಾರ್

ವಿದ್ಯಾರ್ಥಿ ದೆಸೆಯಲ್ಲೇ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಿ: ಡಾ. ಕುಮಾರ್


ಮೂಡುಬಿದಿರೆ: ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರಿಸಬಹುದು ಆದರೆ ವಿದ್ಯಾರ್ಥಿಗಳೇ ತಮ್ಮ ಭವಿಷ್ಯದ ಶಿಲ್ಪಿಗಳು. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.


ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಎಸ್‌ಎಸ್ ಧ್ಯೇಯಗಳನ್ನು ಅಳವಡಿಸಿಕೊಳ್ಳವ ಮೂಲಕ ಉತ್ತಮ ವೈಯಕ್ತಿಕ ಬದುಕನ್ನು ರೂಪಿಸಿಕೊಳ್ಳುವುದರೊಂದಿಗೆ ಸಾಮಾಜಿಕ ಜವಾಬ್ದಾರಿಯಿಂದ ಜೀವನ ನಡೆಸಬಹುದು. ಇದರಿಂದ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯವಾಗಲಿದೆ. ಎನ್‌ಎಸ್‌ಎಸ್ ಸೂಕ್ತ ಪ್ರತಿಭೆಗಳನ್ನು ಗುರುತಿಸುವ ಉತ್ತಮ ವೇದಿಕೆಯಾಗಿದ್ದು ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ತರದ ಅವಕಾಶಗಳನ್ನು ಬಳಸಿಕೊಂಡು ದೇಶದ ಉತ್ತಮ ನಾಗರೀಕರಾಗಿ ಬೆಳೆಯಬೇಕೆಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಮಹಮ್ಮದ್ ಸದಾಕತ್ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಸ್ವಚ್ಛ ತರಗತಿಯಿಂದ ಸ್ವಚ್ಛ ಭಾರತದ ಕಲ್ಪನೆ ಸಾಕಾರಗೊಳ್ಳಲಿದೆ. ಎನ್‌ಎಸ್‌ಎಸ್‌ನ ಧ್ಯೇಯವಾದ ಸೇವಾ ಮನೋಭಾವನೆಗೆ ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಂಡು ಸ್ವಾಸ್ಥ್ಯ ಸಮಾಜಕ್ಕೆ ಕಾರಣರಾಗಬೇಕು ಎಂದರು.


ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ ಅವರು ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಶ್ರಮದಾನದ ಮೂಲಕ ಶ್ರಮಿಕ ವರ್ಗದ ಅನುಭವವನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉದ್ದೇಶ ಹೊಂದಿದ್ದು ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಲಿದೆ ಎಂದರು.


ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಲಾಗಿತ್ತು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಂಬರೀಷ್ ಚಿಪ್ಳೂಂಕರ್, ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ದಾಮೋದರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಸಿಂಚನಾ ಶೆಟ್ಟಿ ಸ್ವಾಗತಿಸಿದರು. ಸುಶಾಂತ್ ಆರ್ ಅಥಿತಿಗಳನ್ನು ಪರಿಚಯಿಸಿದರು. ಜ್ಯೋತಿ ವಂದಿಸಿ, ಆಶಿತಾ ಕಾರ್ಯಕ್ರಮ ನಿರ್ವಹಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم