ಸುಲ್ಕೇರಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Upayuktha
0




ಉಜಿರೆ: ಆಸ್ತಿಯ ನೋಂದಾವಣೆಗೆ 11 ಇ ನಕ್ಷೆ ಅಗತ್ಯವಿಲ್ಲ ಎಂದು ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿ ಬಿ.ಕೆ. ಹೇಳಿದರು. ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ಸುಲ್ಕೇರಿ ಗ್ರಾಮ ಪಂಚಾಯಿತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ  ಸೋಮವಾರ ಸುಲ್ಕೇರಿಯಲ್ಲಿ ಆಯೋಜಿಸಿದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಬಗ್ಗೆ ಅರಿವು ಅಗತ್ಯ. ಕಾನೂನಿನ ಅರಿವು ಇದ್ದಾಗ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳುವಳಿಕೆ ಉಂಟಾಗುತ್ತದೆ. ನ್ಯಾಯಾಲಯಗಳಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಹಾಗೂ ಬಡತನ ರೇಖೆಗಿಂತ ಕೆಳಗೆ ಇರುವವರಿಗೆ ಉಚಿತವಾಗಿ ಕಾನೂನು ನೆರವು ನೀಡಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುತ್ತದೆ. ಕಾನೂನು ಅರಿವು ಮತ್ತು ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರಗಳು ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು ಎಂದು ಅವರು ಹೇಳಿದರು.


ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್ ಕೆ.ಜಿ. ಮಾತನಾಡಿ, ಎಲ್ಲರೂ ಗೌರವ ಹಾಗೂ ಘನತೆಯಿಂದ ಬದುಕಲು ಎಲ್ಲರಿಗೂ ಸಮಾನ ನ್ಯಾಯ ನೀಡಲಾಗುತ್ತದೆ. ಆರ್ಥಿಕ ಭದ್ರತೆ, ಆರೋಗ್ಯ ರಕ್ಷಣೆಯೊಂದಿಗೆ ತೃಪ್ತಿಕರ ಜೀವನ ನಡೆಸಲು ಎಲ್ಲರಿಗೂ ಸಮಾನ ಅವಕಾಶವಿದೆ ಎಂದು ಅವರು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್. ಸುಲ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣ ಪೂಜಾರಿ, ವಸಂತ ಪೂಜಾರಿ, ಮಮ್ತಾಜ್ ಬೇಗಂ ಮತ್ತು ಶೈಲೇಶ್ ಠೋಸರ್ ಉಪಸ್ಥಿತರಿದ್ದರು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಸುಬ್ರಹ್ಮಣ್ಯ ಅಗರ್ತ, ಹಿರಿಯ ನಾಗರಿಕರ ಸವಲತ್ತುಗಳು ಹಾಗೂ ಮಹಿಳೆಯರಿಗೆ ಕಾನೂನು ಮಾಹಿತಿ ಬಗ್ಗೆ ಮತ್ತು ನವಾಜ್ ಶರೀಫ್, ಭೂ ಸಂಬಂಧಿತ ಕಾನೂನು ಮಾಹಿತಿಗಳ ಬಗ್ಗೆ ವಿವರ ನೀಡಿದರು. ಪದ್ಮಕುಮಾರ್ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ವಸಂತ ರಾವ್ ಧನ್ಯವಾದವಿತ್ತರು. ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top