ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ 2021; ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿಗೆ ದ್ವಿತೀಯ ರ‍್ಯಾಂಕ್

Upayuktha
0

 

 




ಪುತ್ತೂರು
: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2021ರ ನೀಟ್  ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ  ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ  ಎರಡನೇ ರ‍್ಯಾಂಕ್ ಗಳಿಸುವುದರ ಮೂಲಕ ಜಿಲ್ಲೆಯಲ್ಲೇ ಅಮೋಘ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ.


ಈಕೆ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 658 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 2856 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 1611 ನೇ ರ‍್ಯಾಂಕ್, ಪಿಡಬ್ಲ್ಯೂಡಿ  ಕೆಟಗರಿ ವಿಭಾಗದಲ್ಲಿ ಎರಡನೇ ರ‍್ಯಾಂಕ್ ಗಳಿಸಿರುತ್ತಾರೆ. ಕೃಷಿ ಕುಟುಂಬದಿಂದ ಬಂದಿರುವ ಸಿಂಚನಾಲಕ್ಷ್ಮಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗ ಸರಣಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  

 

ಎಲ್ಲವನ್ನೂ ಸವಾಲಾಗಿ ತೆಗೆದುಕೊಂಡು ಈಗ ನೀಟ್ ಪರೀಕ್ಷೆಯಲ್ಲೂ ತನ್ನ ಸಾಮಥ್ಯವನ್ನು ತೋರಿಸಿದ್ದಾರೆ. ಈ ಮೂಲಕ ದೇಶದ ಅಗ್ರಮಾನ್ಯ ಕಾಲೇಜಿನಲ್ಲಿ ವೈದಕೀಯ ಶಿಕ್ಷಣ ಪಡೆಯಲು ಅವಕಾಶ ಹೊಂದಿದ್ದಾರೆ. ಈಕೆ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ 96.16 ಶೇಕಡಾ ಅಂಕ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 530ನೇ ರ‍್ಯಾಂಕ್ ಮತ್ತು  ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್, ಬಿಎನ್‌ವೈಎಸ್‌ನಲ್ಲಿ 974ನೇ ರ‍್ಯಾಂಕ್ ಗಳಿಸಿದ್ದಳು.  


ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಪೂರೈಸಿರುವ ಸಿಂಚನಾಲಕ್ಷ್ಮಿ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ.


ಹಾಗೆಯೇ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 430 ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ಖುಷಿ ಎಂ. ಆರ್ (ಅಖಿಲ ಭಾರತ ಮಟ್ಟದಲ್ಲಿ 598973 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 66102ನೇ ರ‍್ಯಾಂಕ್), ದೀಪಾ- 411 ಅಂಕಗಳು(ಅಖಿಲ ಭಾರತ ಮಟ್ಟದಲ್ಲಿ 178456ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 78360 ನೇ ರ‍್ಯಾಂಕ್), 400 ಅಂಕಗಳನ್ನು ಗಳಿಸಿದ ಅಭಿರಾಮ್ ಯು(ಅಖಿಲ ಭಾರತ ಮಟ್ಟದಲ್ಲಿ 192984ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 26744ನೇ ರ‍್ಯಾಂಕ್)ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top