ಉಡುಪಿ: ದಿನಾಂಕ 27.11.2021ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಪೊಲಿಪು, ಕಾಪು ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ "ಡಾ. ಬಿ.ಆರ್. ಅಂಬೇಡ್ಕರ್ ಓದು" ಎಂಬ ಶೀರ್ಷಿಕೆಯಡಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಉಮಾ ಕೆ. ಅವರು ಉದ್ಘಾಟಿಸಿದರು.
ಉಡುಪಿ ಜಿಲ್ಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಎಸ್.ಎಸ್. ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಿದರು. ಕಲಾವಿದರಾದ ಶ್ರೀ ಶಂಕರ್ ದಾಸ್ ಚಂಡ್ಕಳ ಇವರಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೀತಗಾಯನ ಕಾರ್ಯಕ್ರಮ ನಡೆಯಿತು. ಪೊಲಿಪು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ರಮಣಿ, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಧಾಕರ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ಶ್ರೀ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಕಲಾವಿದರಾದ ಶ್ರೀ ಶಂಕರ್‌ದಾಸ್ ಚಂಡ್ಕಳ ವಂದಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ