ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಓದು ಕಾರ್ಯಕ್ರಮ

Upayuktha
0

ಉಡುಪಿ: ದಿನಾಂಕ 10.11.2021ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಲ್ಪೆಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ "ಡಾ. ಬಿ.ಆರ್. ಅಂಬೇಡ್ಕರ್‌ ಓದು" ಎಂಬ ಶೀರ್ಷಿಕೆಯಡಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಕುರಿತು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಶ್ರೀ ವರ್ಗೀಸ್ ಪಿ. ಉದ್ಘಾಟಿಸಿದರು.


ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕ ಶ್ರೀ ವಿಶ್ವನಾಥ್ ಭಟ್, ಡಾ.ಬಿ.ಆರ್. ಅಂಬೇಡ್ಕರ್‌ ಅವರ ಕುರಿತು ಉಪನ್ಯಾಸ ನೀಡಿದರು. ಕಲಾವಿದರಾದ ಶ್ರೀ ಶಂಕರ್‌ದಾಸ್ ಚಂಡ್ಕಳ ಇವರಿಂದ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಕುರಿತು ಗೀತಗಾಯನ ಕಾರ್ಯಕ್ರಮ ನಡೆಯಿತು. ಮಲ್ಪೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಶ್ರೀಮತಿ ಸಂಧ್ಯಾ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀ ಕುಮಾರ ಬೆಕ್ಕೇರಿ ಮತ್ತು ಇಲಾಖೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ಎಸ್. ಜಿ. ಭಾಗವತ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಕಲಾವಿದ ಶ್ರೀ ಶಂಕರ್‌ದಾಸ್ ಚಂಡ್ಕಳ ವಂದಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top