ಉಡುಪಿ: ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯು ನವೆಂಬರ್ 6 ರಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪ್ರಸೂತಿ ತಜ್ಞ ಡಾ.ಪ್ರತಾಪ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಡಿಹೆಚ್ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮ ರಾವ್, ಮಕ್ಕಳ ತಜ್ಞ ಡಾ.ಕಿರಣ ಹೆಬ್ಬಾರ್, ಮೆಡಿಕಲ್ ಜೆನಿಟಿಸ್ಟ್ ಡಾ.ಗಿರೀಶ, ಸಮಾಜ ಸೇವಕಿ ಸರಿತ ಸಂತೋಷ, ಡಾ.ಗಣೇಶ್ ಪೈ ಮತ್ತು ಪ್ರಸೂತಿ ತಜ್ಞೆ ಡಾ.ದೀಕ್ಷಿತಾ ಮತ್ತಿತರರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ