|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬಿಕಾ ಪದವಿ ಕಾಲೇಜಿನಲ್ಲಿ 'ವಾಣಿಜ್ಯ ವಿಕ್ರಮ' ಸಂಘ ಉದ್ಘಾಟನೆ

ಅಂಬಿಕಾ ಪದವಿ ಕಾಲೇಜಿನಲ್ಲಿ 'ವಾಣಿಜ್ಯ ವಿಕ್ರಮ' ಸಂಘ ಉದ್ಘಾಟನೆ

 


ವಾಣಿಜ್ಯ ಕ್ಷೇತ್ರದಲ್ಲಿ ಇಂದು ವಿಫುಲ ಉದ್ಯೋಗಾವಕಾಶಗಳಿವೆ: ಅಕ್ಷತಾ


ಪುತ್ತೂರು: ವಾಣಿಜ್ಯ ಕ್ಷೇತ್ರವು ವಿಶಾಲವಾದ ಕ್ಷೇತ್ರವಾಗಿದ್ದು ವಿದ್ಯಾರ್ಥಿಗಳಿಗೆ ವ್ಯಾಪಕ ವೃತ್ತಿ ಆಯ್ಕೆಗಳನ್ನು ನೀಡುತ್ತಿದೆ. ಈ ಕ್ಷೇತ್ರದಲ್ಲಿ ಯಶಸ್ವಿಯಾಗಬೇಕೆಂಬ ಹುಮ್ಮಸ್ಸಿನಿಂದ ವಿದ್ಯಾರ್ಥಿಗಳೆಲ್ಲರೂ ಕಾರ್ಯತತ್ಪರರಾಗಬೇಕು. ವಾಣಿಜ್ಯ ಕ್ಷೇತ್ರದಲ್ಲಿ ಗಟ್ಟಿಯಾಗಿ ತಳವೂರುವುದಕ್ಕೆ ಬಿಕಾಂ ನಂತಹ ಅಧ್ಯಯನ ಬಲವಾದ ಆಧಾರವನ್ನು ರೂಪಿಸುತ್ತದೆ ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಆರ್ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.


ವೈಯಕ್ತಿಕ ಕೌಶಲ್ಯಗಳು ಮತ್ತು ಸಂವಹನ ಕೌಶಲ್ಯಗಳು ವಾಣಿಜ್ಯ ಕ್ಷೇತ್ರದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಅಲ್ಲದೆ ವ್ಯಕ್ತಿಯ ವೈಯಕ್ತಿಕ ಹಾಗೂ ವೃತ್ತಿಪರ ಬೆಳವಣಿಗೆಗಳಿಗೂ ಅನೇಕ ರೀತಿಯ ಒತ್ತನ್ನು ನೀಡುತ್ತವೆ. ಆದ್ದರಿಂದ ಕಲಿಕಾ ಸಮಯದಲ್ಲಿ ಹಲವು ರೀತಿಯ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವುದರಿಂದ ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಸಿದ್ದರಾಗಲು ಸಹಾಯವಾಗುತ್ತದೆ. ತಮ್ಮ ತಮ್ಮ ಕ್ಷೇತ್ರಗಳ ನಿರೀಕ್ಷೆಗನುಗುಣವಾಗಿ ವಿದ್ಯಾರ್ಥಿಗಳು ಸಿದ್ಧರಾದಾಗ ಉದ್ಯೋಗಾವಕಾಶಗಳು ನಮ್ಮನ್ನರಸಿಕೊಂಡು ಬರುತ್ತವೆ ಎಂದು ಹೇಳಿದರು.  


ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಮಾತನಾಡಿ ವಾಣಿಜ್ಯ ಎಂಬುದು ಅತ್ಯಂತ ಶಕ್ತಿಯುತ ಹಾಗೂ ಪ್ರಭಾವಯುತ ವಿಷಯವಾಗಿದ್ದು ಸಮಾಜವನ್ನು ಅತ್ಯಂತ ವೇಗವಾಗಿ ಪ್ರಭಾವಿಸುತ್ತಿದೆ. ವಾಣಿಜ್ಯ ಅಧ್ಯಯನದಿಂದ ವ್ಯಾಪಾರ ಜಗತ್ತು, ಆರ್ಥಿಕತೆ ಹಾಗೂ ಹಣಕಾಸಿನ ಏರಿಳಿತಗಳ ಬಗ್ಗೆ ಜ್ಞಾನ ವೃದ್ಧಿಸುತ್ತದೆ. ಅಲ್ಲದೆ ಸಿಎ, ಐಬಿಪಿಎಸ್‌ನಂತಹ ಪರೀಕ್ಷೆಗಳಿಗೆ ಸಿದ್ಧಗೊಳ್ಳಲು ಈ ವಿಷಯದ ಅಧ್ಯಯನ ಸಹಾಯಕ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, 'ವಾಣಿಜ್ಯ ವಿಕ್ರಮ' ಎಂಬ ವಾಣಿಜ್ಯ ಸಂಘ ಹೆಸರನ್ನು ಅನಾವರಣಗೊಳಿಸಿ ಮಾತಾಡಿದ ಅಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀಸ್ ನಟ್ಟೋಜ, ಕೃಷಿ ಹಾಗೂ ಆರ್ಥಿಕತೆಯು ಭಾರತದ ಬೆನ್ನೆಲುಬಾಗಿದೆ. ವಾಣಿಜ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳು ದೇಶದ ಆರ್ಥಿಕ ಸ್ಥಿತಿಯನ್ನು ಎತ್ತರಕ್ಕೊಯ್ಯುವವರಾಗಬೇಕು. ಹಾಗಾಗಿ ಭಾರತವನ್ನು ಆರ್ಥಿಕ ನೆಲೆಯಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬ ವಾಣಿಜ್ಯ ವಿದ್ಯಾರ್ಥಿಯೂ ಶ್ರಮಪಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಅಂಬಿಕ ಪದವಿ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ್ ಗೋರೆ, ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥೆ ಶಂಕರ ಸೋಮಯಾಜಿ, ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಅಭಿಷೇಕ ಎಸ್ ಮತ್ತಿತರರು ಉಪಸ್ಥಿತರಿದ್ದರು.


ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅನನ್ಯ ವಿ ಪ್ರಸ್ತಾವನೆಗೈದರು. ವಿದ್ಯಾರ್ಥಿನಿಯರಾದ ಮಹಿಮಾ ಹೆಗ್ಡೆ ಅನನ್ಯ ಲಕ್ಷ್ಮಿ, ಸಿಂಚನ ಮತ್ತು ಸ್ವಾತಿ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಶ್ರೀಹರ್ಷ ಸ್ವಾಗತಿಸಿ ವಿದ್ಯಾರ್ಥಿನಿ ಸ್ವರ್ಣ ಶೆಣೈ ವಂದಿಸಿದರು. ವಿದ್ಯಾರ್ಥಿಗಳಾದ ಅನ್ವಯ್ ಭಟ್ ಹಾಗೂ ಚೈತನ್ಯ ಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ತರುವಾಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post