||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ದೇರ್ಲ ಆಯ್ಕೆ

ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ದೇರ್ಲ ಆಯ್ಕೆಪುತ್ತೂರು: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ದೇರ್ಲ ಆಯ್ಕೆಯಾಗಿದ್ದಾರೆ. ಡಿಸೆಂಬರ್ 18ರಂದು ಶ್ರವಣಬೆಳಗೊಳದ ಜೈನ ಮಠದ ಆವರಣದ ತುಳುವ ವೇದಿಕೆಯಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.


ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಅಖಿಲಾ ಶೆಟ್ಟಿ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿ ಭಾಷಣ, ಪ್ರಬಂಧ, ಕಥೆ ಹಾಗೂ ಕವನ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.


ಬರಹಗಾರ್ತಿಯಾಗಿಯೂ ಗುರುತಿಸಿಕೊಂಡು ತಮ್ಮ ಬರಹಗಳ ಮೂಲಕ ಇದುವರೆಗೂ ಐವತ್ತಕ್ಕೂ ಹೆಚ್ಚು ಸಾಧಕರ ಪರಿಚಯ ಮಾಡಿರುತ್ತಾರೆ. ಕನ್ನಡ ಕರಾವಳಿ ಸಮ್ಮಿಲನ ವೇದಿಕೆಯ ಅಧ್ಯಕ್ಷೆಯಾಗಿದ್ದು ಇವರ ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಈ ಗೌರವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಇವರು ದೇರ್ಲ ಜಯರಾಮ ಶೆಟ್ಟಿ ಹಾಗೂ ಇಂದಿರಾ. ಜೆ ಶೆಟ್ಟಿ ದಂಪತಿ ಪುತ್ರಿ.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post