ಅಖಿಲ ಭಾರತೀಯ ಸಾಹಿತ್ಯ ಪರಿಷದ್ 3ನೇ ರಾಜ್ಯ ಅಧಿವೇಶನದ ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0

ಉಜಿರೆ: ಸಾಹಿತ್ಯ ಸೃಷ್ಟಿಗೆ ನಿರಂತರವಾಗಿ ಪ್ರೋತ್ಸಾಹ ನೀಡಿದಾಗ ಹೊಸ ಹೊಸ ಸಾಹಿತಿಗಳು ಮುನ್ನೆಲೆಗೆ ಬರುತ್ತಾರೆ. ಈ ಮೂಲಕ ಸಾಹಿತ್ಯ ಕ್ಷೇತ್ರವನ್ನು ಇನ್ನಷ್ಟು ಶ್ರೀಮಂತಗೊಳಿಸಬಹುದು. ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬಾಗಲಕೋಟೆಯ ರಾಜ್ಯ ಉಪಾಧ್ಯಕ್ಷ ಎಸ್.ಬಿ ಕೋಟಿ ಹೇಳಿದರು.


ಅವರು ಉಜಿರೆಯಲ್ಲಿ ನಡೆಯುವ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಇದರ 3ನೇ ರಾಜ್ಯ ಅಧಿವೇಶನದ ಸ್ವಾಗತ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು.


ದ.ಕ ಜಿಲ್ಲೆಯ ಇಂಡಿಯನ್‌ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಅಂ ಶಾಂತಾರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಹಿತ್ಯ ಬೆಳೆಯುತ್ತಿದ್ದಂತೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ಆಗ ಮಾತ್ರ ಧನಾತ್ಮಕ ಚಿಂತನೆಗಳು ರೂಪುಗೊಳ್ಳುತ್ತವೆ ಎಂದರು.


ಅಖಿಲ ಭಾರತೀಯ ಸಾಹಿತ್ಯ ಪರಿಷದ್'ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದ ಭಟ್ ಪ್ರಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ ಮತ್ತು ಸಮಾಜಕ್ಕೆ ಗಾಢವಾದ ಸಂಬಂಧವಿದೆ. ತಂತ್ರಜ್ಞಾನ ಇಲ್ಲದ ಹೊತ್ತಲ್ಲಿ ರಚಿತವಾದ ರಾಮಾಯಣ ಗ್ರಂಥ ಜನರನ್ನ ತಲುಪಿತ್ತು. ಇದು ಜನರನ್ನು ಸದೃಢಗೊಳಿಸಲು ಕಾರಣವಾಗಿದೆ. ಸಾಹಿತ್ಯವನ್ನು ಸಮಾಜ ಹೇಗೆ ಗ್ರಹಿಸುತ್ತದೆ ಎನ್ನುವುದಕ್ಕೆ ರಾಮಾಯಣ ಸ್ಪಷ್ಟ ನಿದರ್ಶನ ಎಂದು ಹೇಳಿದರು.


ಈ ಸಂದರ್ಭದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್'ನ 3ನೇ ರಾಜ್ಯ ಅಧಿವೇಶನದ ಆಮಂತ್ರಣ ಪತ್ರಿಕೆ ಹಾಗೂ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಸಂಗಡಿಗರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ರವಿ ಮಂಡ್ಯ ಸ್ವಾಗತಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top