ಮಂಗಳೂರು: ವಿಶ್ವವಿದ್ಯಾನಿಲಯದ ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ ಬಿ ಆರ್ ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಣ ದಿನವನ್ನು ವಿಶ್ವವಿದ್ಯಾನಿಲಯದ 'ಮಂಗಳಾ ಸಭಾಂಗಣದಲ್ಲಿ ಡಿಸೆಂಬರ್ 6 ರಂದು (ಸೋಮವಾರ) ಮುಂಜಾನೆ 10.30 ಕ್ಕೆ' ಆಯೋಜಿಸಿದೆ. ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸ್ಟಡೀಸ್ ನ ಸ್ಕೂಲ್ ಆಫ್ ಎಜುಕೇಶನ್ ನ ಡೀನ್, ನಿವೃತ್ತ ಪ್ರಾಧ್ಯಾಪಕ ಪ್ರೊ. ಗೋವರ್ಧನ್ ವಾಂಖೆಡೆ ಮುಖ್ಯ ಅತಿಥಿಯಾಗಿರಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಎಸ್ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ವಿಶ್ವನಾಥ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ