ಹಿರಿಯ ವಿದ್ಯಾರ್ಥಿ ಸಂಘವು ಶಿಕ್ಷಣ ಸಂಸ್ಥೆಗೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು: ಪಿ. ಸತೀಶ್‌ ರಾವ್

Upayuktha
0

 

ಪುತ್ತೂರು ಡಿ.31: ಪ್ರಸ್ತುತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರಿ ಶಿಕ್ಷಣ ಸಂಸ್ಥೆಗಳು ಸ್ಪರ್ಧೆಯನ್ನು ನೀಡುತ್ತಿದೆ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಸಂಸ್ಥೆಗಳ ಏಳಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಮಹತ್ತರವಾದ ಪಾತ್ರವನ್ನು ವಹಿಸುತ್ತಿದೆ. ಕೊರೋನಾ ನಂತರ ಕಾಲೇಜಿನ ಅನೇಕ ಚಟುವಟಿಕಗಳು ಸ್ತಬ್ಧವಾಗಿದೆ. ಹಿರಿಯ ವಿದ್ಯಾರ್ಥಿಗಳು ತಮ್ಮ ಕೆಲಸದ ಒತ್ತಡದಿಂದ ಕಾಲೇಜಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಹಿಂದೆ ಸರಿಯುತ್ತಿದ್ದಾರೆ. ಈ ಕಾರಣದಿಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವನ್ನು ಮತ್ತೊಮ್ಮೆ ಎದ್ದು ನಿಲ್ಲಿಸುವ ಪ್ರಕ್ರಿಯೆಗಳು ನಡೆಯಬೇಕಿದೆ. ನವ ಮಾಧ್ಯಮಗಳನ್ನು ಬಳಸಿಕೊಂಡು ಹಿರಿಯ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವ ಕಾರ್ಯವನ್ನು ಮಾಡಬೇಕು ಜೊತೆಗೆ ಶಿಕ್ಷಣ ಸಂಸ್ಥೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪಿ.ಸತೀಶ್‌ರಾವ್ ಹೇಳಿದರು.


ಇಲ್ಲಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಿದ 'ವಾರ್ಷಿಕ ಮಹಾಸಭೆ'ಯಲ್ಲಿ ಭಾಗವಹಿಸಿ ಶುಕ್ರವಾರ ಅವರು ಮಾತನಾಡಿದರು.


ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಆಧಾರ ಸ್ತಂಭವೆನಿಸಿಕೊಂಡಿದೆ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘವು ನೊಂದಾಯಿತ ಸಂಘವಾಗಿದ್ದು, ವಾರ್ಷಿಕ ಸಭೆಯಲ್ಲಿ ಎಲ್ಲ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಬೇಕು. ಇಂತಹ ಕಾರ‍್ಯಕ್ರಮಗಳಿಂದ ಕಾಲೇಜಿನ ಚಟುವಟಿಕೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಕಾಲೇಜಿನಲ್ಲಿ ಉತ್ತಮ ಯೋಜನೆಗಳನ್ನು ಹಮ್ಮಿಕೊಳ್ಳಬೇಕು, ಇದರಿಂದ ಕಾಲೇಜಿಗೆ ಮನ್ನಣೆ ಸಿಗುವುದರ ಜೊತೆಗೆ ಕಾಲೇಜಿನ ಅಭಿವೃದ್ಧಿಯಾಗುತ್ತದೆ ಎಂದರು.


ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ ಎನ್ ಮಾತನಾಡಿ, ವಿವೇಕಾನಂದ ವಿದ್ಯಾಸಂಸ್ಥೆಗೆ ತನ್ನದೇ ಆದ ಮನ್ನಣೆಯಿದೆ. ಹಿರಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾಸಂಸ್ಥೆಯ ನಡುವೆಉತ್ತಮ ಬಾಂಧವ್ಯವಿದೆ. ಹಿರಿಯ ವಿದ್ಯಾರ್ಥಿ ಸಂಘ ಕಾಲೇಜಿನಲ್ಲಿ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದು, ಕಾಲೇಜಿನ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದೆ. ಹಿರಿಯ ವಿದ್ಯಾರ್ಥಿ ಸಂಘವನ್ನು ಬೆಳೆಸುವ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಆಲೋಚಿಸಬೇಕು. ಈ ಸಂಘ ಕಾಲೇಜಿನ ಬೆನ್ನೆಲುಬಾಗಿ ನಿಲ್ಲುವುದರ ಜೊತೆಗೆ ಕಾಲೇಜಿನಲ್ಲಾಗುವ ಚಟುವಟಿಕೆಗಳನ್ನು ಸಮಾಜಕ್ಕೆ ತಲುಪಿಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.


ಈ ಸಂದರ್ಭ ಹಿರಿಯ ವಿದ್ಯಾರ್ಥಿ ಸಂಘದ ಲೆಕ್ಕ ಪರಿಶೋಧಕರನ್ನಾಗಿ ಅರವಿಂದ ಕೃಷ್ಣ ಅವರನ್ನು ಮರು ನೇಮಕಗೊಳಿಸಲಾಯಿತು. 2022-23 ನೇ ಸಾಲಿನ ಬಜೆಟನ್ನು ಮಂಡಿಸಲಾಯಿತು. ಅವಶ್ಯಕವಿರುವ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಬಗ್ಗೆ ಚರ್ಚಿಸಲಾಯಿತು. ಹಳೆ ವಿದ್ಯಾರ್ಥಿಗಳು ಈ ಸಂದರ್ಭ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣು ಗಣಪತಿ ಭಟ್‌ ಉಪಸ್ಥಿತರಿದ್ದರು.


ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ. ಮನಮೋಹನ ಎಂ ಮಹಾಸಭೆಯ ನೋಟಿಸ್, ಹಿಂದಿನ ಸಭೆಯ ವರದಿ, ಪರಿಶೋಧಿತಾ ಲೆಕ್ಕಪತ್ರಗಳನ್ನು ವಾಚಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top