ಕರಾಟೆ, ಜೂಡೋ, ಟೇಕ್ವಾಂಡೋ ಕ್ರೀಡಾ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

Upayuktha
0

ಮಂಗಳೂರು: 2021-22ನೇ ಸಾಲಿಗೆ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿನ ವಿದ್ಯಾರ್ಥಿನಿಯರಿಗೆ ನುರಿತ ಮಹಿಳಾ ತರಬೇತುದಾರರಿಂದ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿಗಾಗಿ ಕರಾಟೆ, ಜೂಡೋ, ಟೇಕ್ವಾಂಡೋ ಕ್ರೀಡೆಗಳಲ್ಲಿನ ಅರ್ಹ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ಅರ್ಹ ಕರಾಟೆ, ಜೂಡೋ, ಟೇಕ್ವಾಂಡೋ ಕ್ರೀಡೆಗಳ ಮಹಿಳಾ ತರಬೇತುದಾರರು ಭರ್ತಿ ಮಾಡಿದ ಅರ್ಜಿಯನ್ನು ಇದೇ ಡಿ.31ರೊಳಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ದೂ.ಸಂಖ್ಯೆ: 0824-2451264 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top