ಶೇಕಡ 100 ರಷ್ಟು ಮೊದಲ ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು ನಗರ

Arpitha
0
ಬೆಂಗಳೂರು : ಬೆಂಗಳೂರು ನಗರದಲ್ಲಿ ಶೇಕಡ 100 ರಷ್ಟು ಮೊದಲ ಡೋಸ್ ಪೂರ್ಣಗೊಳಿಸಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಮೊದಲ ಡೋಸ್ ಪೂರ್ಣಗೊಂಡ ಮೊದಲ ಜಿಲ್ಲೆ ಬೆಂಗಳೂರು ಎಂಬ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

ದೇಶದಲ್ಲಿ ಒಮಿಕ್ರಾನ್ ಪ್ರಕರಣ ಅಲ್ಲಲ್ಲಿ ಕಂಡುಬರುತ್ತಿದೆ‌. ರಾಜ್ಯದಲ್ಲಂತೂ ದಿನೇ ದಿನೇ ಈ ಹೊಸ ಪ್ರಕರಣ ದಾಖಲಾಗುತ್ತಿದೆ. ಇದರ ನಡುವೆಯೂ ಜಿಲ್ಲೆ ಜಿಲ್ಲೆಗಳಲ್ಲಿ ಜನರಿಗೆ ವ್ಯಾಕ್ಸಿನ್ ಹಾಕುವ ಕೆಲಸ ಭರದಲ್ಲಿ ಸಾಗುತ್ತಿದೆ. ಆರೋಗ್ಯ ಇಲಾಖೆ ಈ ವಿಚಾರದಲ್ಲಿ ನಮ್ಮೊಂದಿಗೆ ಕೈ ಜೋಡಿಸುತ್ತಿದೆ. ಇದೆಲ್ಲದರ ಮಧ್ಯೆ ಈಗಾಗಲೇ ಬೆಂಗಳೂರು ನಗರ 100 ಶೇಕಡದಷ್ಟು ಮೊದಲ ಡೋಸ್ ಪೂರ್ಣಗೊಳಿಸಿದ ಮಾದರಿ ನಗರವಾಗಿದೆ ಎಂದು ಅವರು ಹೇಳಿದರು.

ಇನ್ನು ಒಮಿಕ್ರಾನ್ ಸೋಂಕಿನ ಬಗ್ಗೆ ಅಧಿಕೃತವಾಗಿ ಸಂಜೆ ವೇಳೆಗೆ ಘೋಷಣೆ ಸಾಧ್ಯತೆ ಇದೆ. ಇದರ ಬಗ್ಗೆ ಸರಿಯಾಗಿ ತಿಳಿಸಲಾಗುವುದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಲ್ಯಾಬ್ ರಿಪೋರ್ಟ್ ಆಧಾರದ ಮೇಲೆ ಒಮಿಕ್ರಾನ್ ಶಂಕೆ ಖಚಿತವಾಗಲಿದೆ ಎಂದು ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top