|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಿ.ಯು ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕ್ಕೆ ಕೇಂದ್ರ ಸೂಚನೆ

ಪಿ.ಯು ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕ್ಕೆ ಕೇಂದ್ರ ಸೂಚನೆ

ಬೆಂಗಳೂರು: ಕರ್ನಾಟಕದ ಎಲ್ಲಾ  ಪದವಿ ಪೂರ್ವ ಕಾಲೇಜುಗಳಲ್ಲಿ ಜನವರಿ 1 ರಿಂದ ಫೆ. 7 ರವರೆಗೆ ಸೂರ್ಯ ನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

75 ನೇ ಅಮೃತ ಮಹೋತ್ಸವದ ಅಂಗವಾಗಿ ' ಸೂರ್ಯ ನಮಸ್ಕಾರ' ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಡಿ. 15 ರಂದು ಪತ್ರ ಬರೆದು ಸೂಚಿಸಿತ್ತು.

ಆದರೆ ಕೇಂದ್ರ ಸರ್ಕಾರದ ಈ ಹೊಸ ಯೋಜನೆಗೆ ಅನೇಕ ಉಪನ್ಯಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಈ ವಯಸ್ಸಿನಲ್ಲಿ ದೇಶ ಪ್ರೇಮದ ಬಗ್ಗೆ ತಿಳಿಸಿಕೊಡಬೇಕೇ ಹೊರತು ಸೂರ್ಯ ನಮಸ್ಕಾರವನ್ನಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

0 Comments

Post a Comment

Post a Comment (0)

Previous Post Next Post