ಉಡುಪಿ: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀ ಋತುರಾಜ್ ಅವಸ್ಥಿಯವರು ಭಾನುವಾರ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಪೇಜಾವರ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳೊಡನೆ ಕೆಲಹೊತ್ತು ಸಮಾಲೋಚನೆ ನಡೆಸಿದರು.
ಶ್ರೀಪಾದರಿಗೆ ಭಕ್ತಿ ಗೌರವ ಅರ್ಪಿಸಿದ ಅವಸ್ಥಿಯವರನ್ನು ಶ್ರೀಗಳೂ ಫಲಮಂತ್ರಾಕ್ಷತೆ ನೀಡಿ ಅಭಿನಂದಿಸಿದರು. ಶ್ರೀಗಳ ಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯರು ನ್ಯಾಯಾಧೀಶರನ್ನು ಬರಮಾಡಿಕೊಂಡರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ