||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರಿನಲ್ಲಿ ಇಂದಿನಿಂದ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ

ಮಂಗಳೂರಿನಲ್ಲಿ ಇಂದಿನಿಂದ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ

ಮಂಗಳೂರು: ನಗರದೆಲ್ಲೆಡೆ ಫುಟ್ ಪಾತ್ ಮತ್ತು ರಸ್ತೆಗಳಲ್ಲಿ ವ್ಯಾಪಾರ ನಡೆಸುತ್ತಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಇಂದಿನಿಂದ ಕಾರ್ಯಾಚರಣೆ ನಡೆಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.

ಈ ವಿಚಾರದ ಬಗ್ಗೆ ಚರ್ಚಿಸಲು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ಬುಧವಾರ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ ಮತ್ತು ಗೂಡಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಫುಟ್ ಪಾತ್ ಮತ್ತು ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವ್ಯಾಪಾರ ನಡೆಸುವ ವ್ಯಾಪಾರಸ್ಥರು ಈ ರಸ್ತೆ ಮತ್ತು ಫುಟ್ಪಾತ್ ಗಳನ್ನು ಅತಿಕ್ರಮಿಸಿದ್ದಾರೆ. ಇದರಿಂದ ಜನರಿಗೆ ಹಾಗೂ ವಿಶೇಷವಾಗಿ ಹಿರಿಯ ನಾಗರಿಕರಿಗೆ ಸಮಸ್ಯೆ ಆಗುತ್ತಿರುವ ಕುರಿತು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಗೂಡಂಗಡಿಗಳನ್ನು ಪೋಲೀಸ್ ಇಲಾಖೆಯ ಸಹಾಯದಿಂದ ತುರ್ತಾಗಿ ತೆರವುಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

0 Comments

Post a Comment

Post a Comment (0)

Previous Post Next Post