|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ಲಸಿಕೆ: ಮೊದಲ ಡೋಸ್ ನೀಡಿಕೆಯಲ್ಲಿ ಕರ್ನಾಟಕ ನಂ–1

ಕೋವಿಡ್ ಲಸಿಕೆ: ಮೊದಲ ಡೋಸ್ ನೀಡಿಕೆಯಲ್ಲಿ ಕರ್ನಾಟಕ ನಂ–1



ಬೆಂಗಳೂರು: ಕೋವಿಡ್–19 ಲಸಿಕೆಯ ಮೊದಲ ಡೋಸ್ ನೀಡಿಕೆಯಲ್ಲಿ ಕರ್ನಾಟಕವು ನಂ–1 ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ‘ಕೂ’ ಮಾಡಿದ್ದಾರೆ.


ಕರ್ನಾಟಕದಲ್ಲಿ ನಿನ್ನೆಯ ವರೆಗೆ (ಡಿಸೆಂಬರ್ 08) ಶೇಕಡಾ 94.38ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಅವರು ಅಂಕಿಅಂಶ ಸಹಿತ ‘ಕೂ’ನಲ್ಲಿ ಮಾಹಿತಿ ನೀಡಿದ್ದಾರೆ.


ಗುಜರಾತ್ ಹಾಗೂ ಮಧ್ಯ ಪ್ರದೇಶ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ಈ ರಾಜ್ಯಗಳಲ್ಲಿ ಮೊದಲ ಡೋಸ್ ನೀಡಿಕೆ ಪ್ರಮಾಣ ಕ್ರಮವಾಗಿ ಶೇಕಡಾ 94.37 ಹಾಗೂ 93.77ರಷ್ಟಿವೆ.


ದೇಶದ ಒಟ್ಟಾರೆ ಕೋವಿಡ್ ಮರಣ ಪ್ರಕರಣಗಳಲ್ಲಿ ಕರ್ನಾಟಕ ಮೂರನೇ ಸ್ಥಾನಕ್ಕೆ ಇಳಿದಿದೆ. ಕರ್ನಾಟಕದಲ್ಲಿ 38,185 ಕೋವಿಡ್ ಮರಣಗಳು ವರದಿಯಾಗಿವೆ. ಕೇರಳವು 38,353 ಮರಣಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದೆ.


0 Comments

Post a Comment

Post a Comment (0)

Previous Post Next Post