ನಟ ಶಿವರಾಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ ವೀರೇಂದ್ರ ಹೆಗ್ಗಡೆ

Upayuktha
0

ಶ್ರೇಷ್ಠ ಕಲಾವಿದರಾಗಿದ್ದ ಹಾಗೂ ಆದರ್ಶ ವ್ಯಕ್ತಿತ್ವ ಹೊಂದಿದ್ದ ಶಿವರಾಂ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು. ಅವರು ಧರ್ಮಸ್ಥಳದ ಅಭಿಮಾನಿ ಭಕ್ತರಾಗಿದ್ದು ಅನೇಕ ಬಾರಿ ಕ್ಷೇತ್ರಕ್ಕೆ ಬಂದಿರುತ್ತಾರೆ. ಅವರ ಮನೆಯಲ್ಲಿದ್ದ ಬೃಹತ್‌ ಗ್ರಂಥಾಲಯ ನೋಡಿ ಅವರ ಸಾಹಿತ್ಯಾಸಕ್ತಿ ಹಾಗೂ ಪುಸ್ತಕ ಪ್ರೀತಿ ಬಗ್ಗೆ ನನಗೆ ಅಭಿಮಾನ ಮೂಡಿತು.


ಸರಳ ಸಜ್ಜನಿಕೆಯ ಕಲಾವಿದರನ್ನು ಕಳೆದುಕೊಂಡು ನಾಡು ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ. ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಶಿವರಾಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top