ಕನ್ನಡದಲ್ಲಿ ತಾಂತ್ರಿಕ ಕೋರ್ಸ್ ಗೆ ನಿರಾಸಕ್ತಿ: ಅವಲೋಕನ ಅಗತ್ಯ

Arpitha
0

ಬೆಂಗಳೂರು: ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಮಾತೃಭಾಷೆಯಲ್ಲೇ ತಾಂತ್ರಿಕ ಶಿಕ್ಷಣ ನೀಡಬೇಕು ಎಂಬ ಮಹದಾಸೆಯಿಂದ ಆರಂಭಿಸಲಾಗಿದ್ದ ಕನ್ನಡದಲ್ಲಿ ಎಂಜಿನಿಯರಿಂಗ್ ಕೋರ್ಸ್ ಗೆ ರಾಜ್ಯದಲ್ಲಿ ಸ್ಪಂದನೆ ಸಿಕ್ಕಿಲ್ಲ. 


ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ಮಾಧ್ಯಮದಲ್ಲಿ ಓದಿಕೊಂಡು ಬಂದವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮಾತೃಭಾಷೆಯಲ್ಲೇ ತಾಂತ್ರಿಕ ಶಿಕ್ಷಣ ಆರಂಭಿಸುವ ಯೋಜನೆ ಹೂಡಿತ್ತು. ಆದರೆ ಪ್ರಥಮ ವರ್ಷ ಕನ್ನಡದಲ್ಲಿ ಸಿವಿಲ್, ಮೆಕ್ಯಾಜಿಕಲ್ ಇಂಜಿನಿಯರಿಂಗ್ ಕೋರ್ಸ್ ಗಾಗಿ 90 ಸೀಟುಗಳನ್ನು ಮೀಸಲಿಟ್ಟರೂ ಯಾವೊಬ್ಬ ವಿದ್ಯಾರ್ಥಿಯೂ ಇದನ್ನು ಆಯ್ಕೆ ಮಾಡಿಕೊಂಡಿಲ್ಲ.

ಕನ್ನಡದಲ್ಲಿ ಇಂಜಿನಿಯರಿಂಗ್ ಮಾಡಿದರೆ ಬೇರೆ ರಾಜ್ಯಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ತೊಂದರೆಯಾಗುತ್ತದೆ ಎಂಬ ಆತಂಕವೇ ಇದಕ್ಕೆ ಕಾರಣ. ಹೀಗಿರುವಾಗ ಈ ಯೋಜನೆಯನ್ನು ಕೈ ಬಿಡುವುದೇ ಅಥವಾ ಬದಲಾವಣೆ ತರಬೇಕೇ ಎಂಬುದನ್ನು ಯೋಚಿಸಬೇಕಾಗಿದೆ.

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top