ಡಾ.ಬಿ.ಎಂ. ಹೆಗ್ಡೆಯವರಿಗೆ ಡಾ. ಅನುಪಮಾ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರದಾನ

Upayuktha
0

ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ.ಬಿ.ಎಂ.ಹೆಗ್ಡೆ ಅವರಿಗೆ ಮಂಗಳೂರಿನ ಅವರ ನಿವಾಸದಲ್ಲಿ ಡಿ.17ರ ಶುಕ್ರವಾರ ಪ್ರದಾನ ಮಾಡಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.


ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಪ್ರಾಧಿಕಾರದ ಸದಸ್ಯರಾದ ಟಿ.ಎ.ಎನ್. ಖಂಡಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಬಿ.ಎಂ. ಹೆಗ್ಡೆಯವರ ಪುತ್ರರಾದ ಮಂಜುನಾಥ್ ಹೆಗ್ಡೆ, ಭುವನ ಪ್ರಸಾದ್ ಹೆಗ್ಡೆ, ಚೈತನ್ಯ ಕೆ ಶೆಟ್ಟಿ, ನಿರುಪಮಾ ಪ್ರಸಾದ್ ಶೆಟ್ಟಿ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನ ಪ್ರದಾನ ಸಮಾರಂಭ ಹಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ಡಾ.ಬಿ.ಎಂ.ಹೆಗ್ಡೆ ಅವರು ಆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆದ ಕಾರಣ ಪ್ರಾಧಿಕಾರದ ಅಧ್ಯಕ್ಷರು ಮಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಶಸ್ತಿ ಪ್ರದಾನ ಮಾಡಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top