ಮಂಗಳೂರು ವಿವಿಯಲ್ಲಿ ಡಾ ಬಿ ಆರ್‌ ಅಂಬೇಡ್ಕರ್‌ ಅವರ 65ನೇ ಮಹಾಪರಿನಿರ್ವಾಣ ದಿನಾಚರಣೆ

Upayuktha
0

ಅಂಬೇಡ್ಕರ್‌ ಬಗ್ಗೆ ಬೋಧಿಸುವವರು ಅನುಸರಿಸಲು ಕಲಿಯಬೇಕು: ಪ್ರೊ. ಗೋವರ್ಧನ್‌ ವಾಂಖೆಡೆ


ಮಂಗಳೂರು: ದಲಿತರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಪ್ರಗತಿಗೆ ಉನ್ನತ ಶಿಕ್ಷಣ ಅತ್ಯಗತ್ಯವಾಗಿದೆ. ಇದೇ ಉದ್ದೇಶದಿಂದ ಡಾ. ಬಿ ಆರ್‌ ಅಂಬೇಡ್ಕರ್‌ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು, ಎಂದು ಮುಂಬೈನ ಟಾಟಾ ಇನ್ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸ್ಟಡೀಸ್‌ ನ ಸ್ಕೂಲ್‌ ಆಫ್‌ ಎಜುಕೇಶನ್‌ ನ ಡೀನ್‌, ನಿವೃತ್ತ ಪ್ರಾಧ್ಯಾಪಕ ಪ್ರೊ. ಗೋವರ್ಧನ್‌ ವಾಂಖೆಡೆ ಅಭಿಪ್ರಾಯಪಟ್ಟರು.


ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಬಿ ಆರ್‌ ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಮಂಗಳಾ ಸಂಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಡಾ ಬಿ ಆರ್‌ ಅಂಬೇಡ್ಕರ್‌ ಅವರ 65ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಭಾರತದಲ್ಲಿ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಮತ್ತು ಸಮಯೋಚಿತವಾಗಿ ಜಾರಿಗೆ ತರಲು ಆಡಳಿತ ವಿಫಲವಾಗಿದೆ. ಜಾತಿ ವ್ಯವಸ್ಥೆ, ಧಾರ್ಮಿಕ ಕಟ್ಟುಪಾಡುಗಳು ಬಡತನ ಮತ್ತು ಆರ್ಥಿಕ ಅಸಮಾನತೆಗೆ ಕಾರಣವಾಗಿದೆ, ಎಂದರು. ಇದೇ ವೇಳೆ ಅವರು, ಅಂಬೇಡ್ಕರ್‌ ಬಗ್ಗೆ ಬೋಧಿಸುವವರು ಅವರನ್ನು ಅನುಸರಿಸಲು ಕಲಿಯಬೇಕು. ನಂಬಿಕೆ, ವೈಚಾರಿಕತೆಗಳು ಜೊತೆಜೊತೆಗೆ ಸಾಗಬೇಕು, ಎಂದರು.


ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಎಸ್‌ ಯಡಪಡಿತ್ತಾಯ, ಅಂಬೇಡ್ಕರ್‌ ಅವರ ಚಿಂತನೆಗಳು ಮನುಕುಲವನ್ನು ಕುರಿತಾಗಿರುವುದರಿಂದ ಅವರು ಜಾಗತಿಕವಾಗಿ ಪ್ರಸ್ತುತರು. ಶೈಕ್ಷಣಿಕ ನೆಲೆಯಿಂದ ಅವರನ್ನು ಅರ್ಥಮಾಡಿಕೊಳ್ಳಲು ಇನ್ನಷ್ಟು ಅಧ್ಯಯನ ನಡೆಯಬೇಕು ಎಂದರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್‌ ಕುಮಾರ್‌ ಸಿಕೆ, ಡಾ. ಬಿ ಆರ್‌ ಅಂಬೇಡ್ಕರ್‌ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ವಿಶ್ವನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top