ರುಡ್‌ಸೆಟ್ ಸಂಸ್ಥೆಗೆ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Upayuktha
0

 

ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಸ್ಥೆಗೆ ಭೇಟಿ ನೀಡಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಛಾಯಾಗ್ರಹಣದಲ್ಲಿ ತಾಳ್ಮೆ ಬಹಳ ಮುಖ್ಯ. ಛಾಯಾಗ್ರಾಹಕರಲ್ಲಿ ಭಾವನೆಯನ್ನು ಅರಿತು ಛಾಯಾಚಿತ್ರವನ್ನು ತೆಗೆಯುವುದು ಛಾಯಾಗ್ರಾಹಕನ ಕಲೆ ಎಂದು ಕಿವಿ ಮಾತು ನೀಡಿದರು.


ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್‌ ಕಲ್ಲಾಪುರ ಸ್ವಾಗತಿಸಿದರೆ, ನಿರ್ದೇಶಕರಾದ ಎಂ.ಸುರೇಶ್‌ರವರು ತರಬೇತಿಯ ಹಿನ್ನೋಟ ನೀಡಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರಾದ ಸೂರ್ಯಪ್ರಕಾಶ್‌ರವರು ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರೆ, ಹಿರಿಯ ಉಪನ್ಯಾಸಕರಾದ ಶ್ರೀಮತಿ ಅನಸೂಯರವರು ಧನ್ಯವಾದವಿತ್ತರು.


ಈ ತರಬೇತಿ ಕಾರ್ಯಕ್ರಮದಲ್ಲಿ 23 ಶಿಬಿರಾರ್ಥಿಗಳು ಭಾಗವಹಿಸಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತರಬೇತಿಯಲ್ಲಿ ತೆಗೆದ ಛಾಯಾಚಿತ್ರಗಳ ಪ್ರದರ್ಶನವನ್ನು ವೀಕ್ಷಿಸಿದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮೆನ್ಸ್ ಪಾರ್ಲರ್‌ ತರಬೇತಿಯ ಶಿಬಿರಾರ್ಥಿಗಳು ಕೂಡ ಭಾಗವಹಿಸಿದ್ದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top