|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಾಂಧೀಜಿ ಅವರ ಜೀವನವೇ ಒಂದು ಸಂದೇಶ: ಡಾ. ಶ್ಯಾಮಸುಂದರ ಬಿದರಕುಂದಿ

ಗಾಂಧೀಜಿ ಅವರ ಜೀವನವೇ ಒಂದು ಸಂದೇಶ: ಡಾ. ಶ್ಯಾಮಸುಂದರ ಬಿದರಕುಂದಿ

 

ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ.ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.


ಹಿರಿಯ ವಿದ್ವಾಂಸರು ಹಾಗೂ ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ನಿಕಟಪೂರ್ವ ಅಧ್ಯಕ್ಷರಾದ ಡಾ.ಶ್ಯಾಮಸುಂದರ ಬಿದರಕುಂದಿ 'ಗಾಂಧೀಜಿ ಮತ್ತು ಉದ್ಯಮಶೀಲತೆ' ವಿಷಯದ ಕುರಿತು ದತ್ತಿ ಉಪನ್ಯಾಸವನ್ನು ನೀಡಿ ಮಾತನಾಡುತ್ತ ಗಾಂಧೀಜಿ ಮನುಷ್ಯ ಲೋಕದ ಒಂದು ಅದ್ಭುತ ಶಕ್ತಿ, ಅವರ ಜೀವನವೇ ಒಂದು ಸಂದೇಶ. ದೇಶದ ಆರ್ಥಿಕತೆಗೆ ಸ್ವದೇಶಿ ಉದ್ಯಮದಿಂದಲೇ ಭವಿಷ್ಯವಿದೆ ಎಂದು ನಂಬಿದ್ದರು. ಗಾಂಧೀಜಿಯವರು ಗುಡಿಕೈಗಾರಿಕೆಗೆ ಒತ್ತು ನೀಡಿ ಎಲ್ಲಾ ಜನರು ಯಂತ್ರಗಳ ಮೇಲೆ ಅವಲಂಬಿಸದೆ ಸ್ವತಃ ದುಡಿಮೆ ಮಾಡಿ ಜೀವನ ನಡೆಸಬೇಕೆಂದು ಆಶಿಸಿದ್ದರು. ಆದರೆ ಬದಲಾದ ಕಾಲಘಟ್ಟದಲ್ಲಿ ಇಂದು ಆಧುನಿಕ ಯಂತ್ರೋಪಕರಣಗಳು ಆಗಮಿಸಿ ಗಾಂಧಿ ಕಲ್ಪನೆಯ ಉದ್ಯಮಶೀಲತೆಗೆ ಹಿನ್ನಡೆ ಉಂಟಾಗಿದೆ ಎಂದು ಅಭಿಪ್ರಾಯ ಪಟ್ಟರು.


ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ. ವೂಡೇ. ಪಿ ಕೃಷ್ಣ, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಸತ್ಯಮಂಗಲ ಮಹಾದೇವ ಹಾಗೂ ಶೇಷಾದ್ರಿಪುರಂ ಸಂಜೆ ಪದವಿ  ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್, ವೂಡೇ ಪ್ರತಿಷ್ಠಾನದ ಪ್ರತಿನಿಧಿ ಡಬ್ಲ್ಯೂ.ಡಿ ಅಶೋಕ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post