ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಪರಿಸರ ಪ್ರಿಯರ ಹೋರಾಟ

Arpitha
0
ಮೈಸೂರು: ಕೇಂದ್ರ ಸರ್ಕಾರದ ತೀರ್ಥ ಕ್ಷೇತ್ರಗಳ ಅಭಿವೃದ್ಧಿ ಯೋಜನೆಯಡಿ ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ ಅದಕ್ಕೆ ಮೈಸೂರಿನ ಪರಿಸರ ಪ್ರಿಯರು ಹೋರಾಟವನ್ನು ಆರಂಭಿಸಿದ್ದಾರೆ.

'ಚಾಮುಂಡಿ ಬೆಟ್ಟ ಉಳಿಸಿ' ಎಂಬ ಅಭಿಯಾನವನ್ನು ಪರಿಸರ ಪ್ರೇಮಿಗಳು ಆರಂಭಿಸಿದ್ದು ಅದಕ್ಕೆ ವ್ಯಾಪಕವಾಗಿ ಜನಬೆಂಬಲ ವ್ಯಕ್ತವಾಗುತ್ತಿದೆ. ಸ್ಥಳೀಯ ಶಾಸಕ ಜಿ.ಟಿ ದೇವೇಗೌಡರೂ ಈ ಹೋರಾಟಕ್ಕೆ ಸಾಥ್ ನೀಡಿದ್ದು ಅಧಿವೇಶನದಲ್ಲಿ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಬೆಟ್ಟದ ಮೇಲೆ ಯಾವುದೇ ಕೆಲಸ ಮಾಡುವ ಮುನ್ನ ತಜ್ಞರ ಸಮಿತಿ ರಚನೆ ಮಾಡಿ ಅವರು ನೀಡುವ ವರದಿಯ ಆಧಾರದ ಮೇಲೆ ಮುಂದಿನ ಕಾರ್ಯ ನಡೆಸಬೇಕೆಂಬ ಸಲಹೆ, ಪರಿಸರ ತಜ್ಞರು ಹಾಗೂ ಸಾರ್ವಜನಿಕರಿಂದ ಕೇಳಿ ಬಂದಿದೆ.  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top