ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

Upayuktha
0

 

ಮೇರಿಹಿಲ್‌: ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ. ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿಯಾದ ಹರೀಶ್ಚಂದ್ರ ಇವರ ಮಗಳಾದ ಗೌತಮಿ ಕೆ.ಹೆಚ್ ರವರ ಮೊದಲನೇ ವರ್ಷದ ಬಿಕಾಂ ಮತ್ತು ಸಿಎ ವ್ಯಾಸಂಗಕ್ಕಾಗಿ ರೂ. 5,000/- ಕೇಂದ್ರ ಕಛೇರಿಯಿಂದ ಸಹಾಯ ಧನ ಮಂಜೂರಾಗಿರುತ್ತದೆ.


ಈ ನಿಟ್ಟಿನಲ್ಲಿ ದಿನಾಂಕ 20-12-2021ನೇ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ.ಮುರಲೀ ಮೋಹನ್ ಚೂಂತಾರು ಇವರು ಹರೀಶ್ಚಂದ್ರ ಇವರಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ಗೃಹರಕ್ಷಕರಾದ ದಿವಾಕರ್, ದುಷ್ಯಂತ್, ಮಹೇಶ್ ಪ್ರಸಾದ್, ವಿಮಲ, ತ್ಯಾಗವಲ್ಲಿ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top