ಪುತ್ತೂರು ಡಿ.01: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಸಂಘದ ಆಯ್ಕೆ ಪ್ರಕ್ರಿಯೆಯು ಬುಧವಾರ ನಡೆಯಿತು. 2021-22ನೇ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ವಚನ್ ಶೆಟ್ಟಿ, ಕಾರ್ಯದರ್ಶಿಯಾಗಿ ಆಶಿಶ್ ಕುಮಾರ್ ಹಾಗೂ ಜತೆ ಕಾರ್ಯದರ್ಶಿಯಾಗಿ ತನುಶ್ರೀ ಬೆಳ್ಳಾರೆ ಆಯ್ಕೆಯಾದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯ ಚುನಾವಣಾಧಿಕಾರಿಯಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಕಾರ್ಯನಿರ್ವಹಿಸಿದರು. ಇವರಿಗೆ ಕಾಲೇಜಿನ ಚುನಾವಣಾ ಸಮಿತಿ ಹಾಗೂ ಬೋಧಕ ಮತ್ತು ಬೋಧಕೇತರ ವರ್ಗ ಸಹಕರಿಸಿತು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ