ಡಿ.18ರಂದು ಅಂಬಿಕಾದಲ್ಲಿ ಗೀತೋಪದೇಶ ತಾಳಮದ್ದಳೆ, ಪುಸ್ತಕ-ದೃಶ್ಯ ಮುದ್ರಿಕೆ ಬಿಡುಗಡೆ

Upayuktha
0

ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಮಹಾವಿದ್ಯಾಲಯದ ತತ್ತ್ವಶಾಸ್ತ್ರ, ಸಂಸ್ಕೃತ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಗೀತಾ ಜಯಂತಿ ಯಕ್ಷಗಾನ - ತಾಳಮದ್ದಳೆ ಹೊಸ್ತೋಟ ಮಂಜುನಾಥ ಭಾಗವತ ವಿರಚಿತ ಗೀತೋಪದೇಶ 18-12-2021 (ನಾಳೆ) ಅಂಬಿಕಾ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.


ಈ ಕಾರ್ಯಕ್ರಮದ ಬಳಿಕ ಸಭಾ ಕಾರ್ಯಕ್ರಮ, ಪುಸ್ತಕ ಬಿಡುಗಡೆ ಮತ್ತು "ಸಾರ್ಥ- ಗೀತಾ - ದೃಶ್ಯ - ಮುದ್ರಿಕೆ" ಬಿಡುಗಡೆ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ಚಿಂತಕರು ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯ ಲಕ್ಷ್ಮೀಶ ತೋಳ್ಪಾಡಿ ವಹಿಸಲಿದ್ದು, ಉದ್ಘಾಟನೆಯನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾಡಲಿದ್ದಾರೆ.


ಧಾರ್ಮಿಕ ಚಿಂತಕರು ಮತ್ತು ಪುರೋಹಿತ ವೇದಮೂರ್ತಿ ಶ್ರೀಕೃಷ್ಣ ಉಪಾದ್ಯಾಯ ಗೀತೋಪನ್ಯಾಸ ಮಾಡಲಿದ್ದು, ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ, ಅಂಬಿಕಾ ಮಹಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಧಾರ್ಮಿಕ ಚಿಂತಕರು ಮತ್ತು ಪುರೋಹಿತ ವೇದಮೂರ್ತಿ ಕೇಶವ ಭಟ್ಟ ಕೇಕಣಾಜೆ ಭಾಗವಹಿಸಲಿದ್ದಾರೆ.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ವಿನಾಯಕ ಭಟ್ಟ ಗಾಳಿಮನೆ, ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ತೇಜಶಂಕರ ಸೋಮಯಾಜಿ ಉಪಸ್ಥಿತರಿರಲಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top