ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲರ ಭೇಟಿ

Upayuktha
0



ಉಡುಪಿ:
ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇವರು ಇಂದು ಆಗಮಿಸಿ ದೇವರ ದರ್ಶನ ಪಡೆದರು. ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ, ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು.


ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top