ಉಜಿರೆ: ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಅವರನ್ನು ಸ್ವಾಗತಿಸಲಾಯಿತು.
ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಡಿ. ಶ್ರೇಯಸ್ ಕುಮಾರ್ ರಾಜ್ಯಪಾಲರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು.
ದೇವರ ದರ್ಶನದ ಬಳಿಕ ರಾಜ್ಯಪಾಲರು ಅನ್ನಪೂರ್ಣ ಭೋಜನಾಲಯವನ್ನು ವೀಕ್ಷಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಪಾಲರಿಗೆ ಸವಿವರ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
ರಾಜ್ಯಪಾಲರು ಮಂಜೂಷಾ ವಸ್ತು ಸಂಗ್ರಹಾಲಯ ಹಾಗೂ ಕಾರ್ ಮ್ಯೂಸಿಯಂಗೂ ಭೇಟಿ ನೀಡಿ ಸವಿವರ ಮಾಹಿತಿ ಪಡೆದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ