||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾಳೆಬರೆ ಘಾಟಿ: ಭಾರೀ ವಾಹನಗಳ ಸಂಚಾರ ನಿಷೇಧ

ಬಾಳೆಬರೆ ಘಾಟಿ: ಭಾರೀ ವಾಹನಗಳ ಸಂಚಾರ ನಿಷೇಧ

ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಹಾಗೂ ಮಡಿಕೇರಿ-ಸಂಪಾಜೆ ರಸ್ತೆ ಕುಸಿದಿರುವ ಹಿನ್ನೆಲೆ ವಾಹನಗಳ ಸಂಚಾರ ನಿರ್ಬಂಧಿಸಿರುವುದರಿಂದ ಈ ಮಾರ್ಗಗಳಲ್ಲಿ ಸಂಚರಿಸುವ ಸರಕು ಸಾಗಣೆ ವಾಹನಗಳು ಬಾಳೆಬರೇ ಘಾಟ್ ಮೂಲಕ ಸಂಚರಿಸುತ್ತಿದ್ದು, ಅಧಿಕ ಭಾರ ಹೊತ್ತ ವಾಹನಗಳ ಸಂಚಾರದಿಂದ ರಸ್ತೆ, ಸೇತುವೆ ಮತ್ತು ಮೋರಿಗಳು ಹಾನಿಗೊಳ್ಳುವ ಸಂಭವ ಇದೆ.


ಹೀಗಾಗಿ ಬ್ರಹ್ಮಾವರ-ಜನ್ನಾಡಿ (ಜಿಲ್ಲಾ ಮುಖ್ಯ ರಸ್ತೆ), ಸೋಮೇಶ್ವರ-ಕೋಟೇಶ್ವರ ರಸ್ತೆ (ಜಿ.ಮು.ರ), ವಿರಾಜ್‌ಪೇಟೆ-ಬೈಂದೂರು (ರಾಜ್ಯ ಹೆದ್ದಾರಿ), ಸೌಢ-ಸಿದ್ಧಾಪುರ (ಜಿ.ಮು.ರ) ಹಾಗೂ ತೀರ್ಥಹಳ್ಳಿ-ಕುಂದಾಪುರ ರಸ್ತೆಯಲ್ಲಿ 18,500 ಆರ್.ಎಲ್.ಡಬ್ಲ್ಯೂಕ್ಕಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಸದರಿ ಭಾರೀ ವಾಹನಗಳು ರಾಷ್ಟ್ರೀಯ ಹೆದ್ದಾರಿ 66 ಮೂಲಕ ಕೊಗಾರ್ ಘಾಟಿ-ಸಾಗರವಾಗಿ ಶಿವಮೊಗ್ಗಕ್ಕೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವಾಹನ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿರುತ್ತಾರೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post