|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಳ್ವಾಸ್‌ನಲ್ಲಿ ಸ್ಟೂಡೆಂಟ್ ಚಾಪ್ಟರ್ ಉದ್ಘಾಟನೆ

ಆಳ್ವಾಸ್‌ನಲ್ಲಿ ಸ್ಟೂಡೆಂಟ್ ಚಾಪ್ಟರ್ ಉದ್ಘಾಟನೆ

 

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ "ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್‌ನ ಮಂಗಳೂರು ವಿಭಾಗದ ಸ್ಟೂಡೆಂಟ್ ಚಾಪ್ಟರ್‌"ಗೆ ಶನಿವಾರ ಚಾಲನೆ ನೀಡಲಾಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಭಾಗದ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್‌ನ ಅಧ್ಯಕ್ಷ ಡಿ.ಬಿ.ಮೆಹ್ತಾ, ಗ್ರೀನ್ ಬಿಲ್ಡಿಂಗ್ ಪರಿಕಲ್ಪನೆಯ ಮಹತ್ವ, ಕಾರ್ಬನ್ ಫೂಟ್ ಪ್ರಿಂಟ್, ಪರಿಸರ ಸಂರಕ್ಷಣೆಯಲ್ಲಿ ಎಲ್ಲರ ಜವಾಬ್ದಾರಿ ಇತ್ಯಾದಿ ವಿಷಯಗಳ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡೀಸ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಅಜಿತ್ ಹೆಬ್ಬಾರ್ ಎಲ್ಲರನ್ನು ಸ್ವಾಗತಿಸಿ, ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್‌ನ ಸಹಯೋಗದೊಂದಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆಸಲಾಗುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ, ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ ಬೆಂಗಳೂರು ವಿಭಾಗದ ವತಿಯಿಂದ ಗ್ರೀನ್ ಬಿಲ್ಡಿಂಗ್‌ನಲ್ಲಿ ಇತ್ತೀಚೆಗಿನ ಬೆಳವಣಿಗೆಗಳು ಎಂಬ ವಿಷಯದ ಬಗ್ಗೆ ವೆಬಿನಾರ್ ಆಯೋಜಿಸಲಾಯಿತು. ಗ್ರೀನ್ ಬಿಲ್ಡಿಂಗ್ ಕೌನ್ಸಿಲರ್ ರೇಖಾ ಮೌಲಾತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.


ಸ್ಟೂಡೆಂಟ್ ಚಾಪ್ಟರ್ ಸಂಯೋಜಕಿ ಪ್ರೊ. ಕಾವ್ಯಶ್ರೀ ವಂದನಾರ್ಪಣೆಗೈದರು. ವಿದ್ಯಾರ್ಥಿ ನಳನ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم