||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

 

ದೇಶಭಕ್ತ ನಾಯಕರನ್ನು ಸ್ಫೂರ್ತಿಯಾಗಿ ಇರಿಸಿಕೊಳ್ಳಿ: ಡಾ. ಕಲ್ಲಡ್ಕ ಪ್ರಭಾಕರ ಭಟ್


ಪುತ್ತೂರು ಡಿ. 21: ವಿದ್ಯಾರ್ಥಿಗಳಿಗೆ ದೇಶಕ್ಕೆ ಹೋರಾಡಿದ ಅದೆಷ್ಟೋ ಹೋರಾಟಗಾರರು ಆದರ್ಶವಾಗಬೇಕು. ಭಗತ್ ಸಿಂಗ್ ವೀರ ಸಾರ್ವಕರ್, ಮದನ್‌ಲಾಲ್ ಧಿಂಗ್ರಾ ಮೊದಲಾದ ಹೋರಾಟಗಾರರು ಆದರ್ಶ ನಾಯಕರಾಗಬೇಕೇ ಹೊರತು ಸಿನೆಮಾ ತಾರೆಗಳು ಮುಂತಾದವರಲ್ಲ ಎಂದು ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.


ಅವರು ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು.


ವಿವೇಕಾನಂದರ ಆಧ್ಯಾತ್ಮಿಕ ಚಿಂತನೆ ನಮ್ಮಲ್ಲಿರಲಿ, ಹೆಣ್ಣುಮಕ್ಕಳನ್ನು ತಾಯಿಯಂತೆ ಕಾಣಬೇಕು ಎಂದು ತಿಳಿಸಿದ ದೇಶ ನಮ್ಮದು. ನಮ್ಮ ದೇಶಕ್ಕಾಗಿ ಹೋರಾಡಿದ ಹೋರಾಡುತ್ತಿರುವ ಅದೆಷ್ಟೋ ತಾಯಂದಿರು ನಮಗೆ ಮಾದರಿ ಎಂದು ಅಭಿಪ್ರಾಯಪಟ್ಟರು.


ವಿದ್ಯಾರ್ಥಿ ನಾಯಕರುಗಳು ಈ ಮಹಾನ್ ಆದರ್ಶ ವ್ಯಕ್ತಿಗಳ ಆದರ್ಶವನ್ನು ಮೈಗೂಡಿಸಿಕೊಂಡು ಸಮಾಜದ ಹಿತಕ್ಕೋಸ್ಕರ, ರಾಷ್ಟ್ರದ ಹಿತಕ್ಕೋಸ್ಕರ ಕೆಲಸ ಮಾಡಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮಾತನಾಡಿ, ಇಂದಿನ ದಿನಗಳಲ್ಲಿ ಪೋಸ್ಟರ್‌ಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಭಾವಚಿತ್ರ ಹರಿದಾಡಿಬಿಟ್ಟರೆ ತಾವೇ ದೊಡ್ಡ ನಾಯಕರು ಎಂಬ ತಪ್ಪುಕಲ್ಪನೆ ಕೆಲವರಲ್ಲಿದೆ. ಇದಕ್ಕೆ ವಿದ್ಯಾರ್ಥಿಗಳೂ ಹೊರತಾಗಿಲ್ಲ. ವಿದ್ಯಾರ್ಥಿ ಸಂಘಗಳಿಗೆ ತನ್ನದೇ ಆದ ಮಹತ್ವವಿದೆ. ಅದರಲ್ಲೂ ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಇಡೀ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗುರುತಿಕೊಂಡಿರುವ ವ್ಯವಸ್ಥೆಯಾಗಿದೆ. ಆರಂಭದಿಂದಲೂ ನಮ್ಮ ವಿದ್ಯಾರ್ಥಿ ನಾಯಕರು ಪ್ರಚಾರದ ಹಂಗಿಲ್ಲದೇ ವಿದ್ಯಾರ್ಥಿಗಳಿಗಾಗಿ ಸಂಸ್ಥೆಗಾಗಿ, ಸಮಾಜಕ್ಕಾಗಿ ಕೆಲಸ ಮಾಡುತ್ತಾ ಬಂದಿದೆ. ವಿದ್ಯಾರ್ಥಿ ಸಂಘಗಳು ಒಂದು ಕಾಲೇಜಿನ ಆಧಾರ ಸ್ಥಂಭವಾಗಿ ಬೆಳೆಯಬೇಕು. ಅದಕ್ಕಾಗಿ ವಿದ್ಯಾರ್ಥಿ ನಾಯಕರುಗಳು ಸರಿಯಾದ ಮಾರ್ಗದಲ್ಲಿ ಮುನ್ನಡೆಯುವ ಅವಶ್ಯಕತೆಯಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ಮನುಷ್ಯ ಸಂಘಜೀವಿ ನಾವು ಎಲ್ಲಿ ಹೋದರು ಸಂಘಟನೆಗಳನ್ನು ರಚಿಸಿ ಕಾರ್ಯಸಾಧನೆಗೆ ವೇದಿಕೆಯನ್ನು ಕಲ್ಪಿಸಿಕೊಳ್ಳುತ್ತೇವೆ. ವಿದ್ಯಾರ್ಥಿಗಳ ಕಾರ್ಯ ಸಾಧನೆಗಾಗಿ ಇರುವ ಸಂಸ್ಥೆಗಳಲ್ಲಿ ವಿದ್ಯಾರ್ಥಿ ಸಂಘವೂ ಒಂದು. ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಸರ್ವತೋಮುಖ ಬೆಳವಣಿಗೆಯನ್ನು ಹೊಂದಬೇಕು. ಈ ರೀತಿಯ ಸಂಘಟನೆಗಳು ಸಮುದಾಯ ಜೀವನದ ಅನುಭವಕ್ಕೆ ದಾರಿ ಮಾಡಿಕೊಟ್ಟು, ವ್ಯಕ್ತಿತ್ವ್ವ ನಿರ್ಮಾಣಕ್ಕೆ ಸಹಾಯಕವಾಗುತ್ತದೆ ಎಂದು ತಿಳಿಸಿದರು.


ಕಾಲೇಜು ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ಬೋಧಿಸಿದರು. ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಹಾಗೂ ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರ ಪೋಷಕರನ್ನು ಅಭಿನಂದಿಸಲಾಯಿತು. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಡೆಸಲಾಗುವ ಎನ್‌ಸಿಸಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಕೊನೆ ಸುತ್ತಿನಲ್ಲಿ ಅವಕಾಶ ವಂಚಿತರಾದ ಎನ್.ಸಿ.ಸಿ. ಕೆಡೆಟ್ ಯಶಿತ ಅವರನ್ನೂ ಈ ಸಂದರ್ಭದಲ್ಲಿ ಗುರುತಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ಭಾವಗೀತೆ ಹಾಗೂ ದೇಶಭಕ್ತಿಗೀತೆ ಹಾಡಲ್ಪಟ್ಟವು. ಬಿಕಾಂ ವಿದ್ಯಾರ್ಥಿನಿ ಕೀರ್ತಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಪ್ರಸ್ತಾವನೆಗೈದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಚನ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಆಶಿಶ್ ಎನ್ ಎಂ ವಂದಿಸಿದರು. ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ತನುಶ್ರೀ ಬೆಳ್ಳಾರೆ ಕಾರ್ಯಕ್ರಮವನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post