ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್. ಪ್ರಮುಖವಾದ ಪಾತ್ರವಹಿಸುತ್ತದೆ: ಡಾ. ಶೇಷಪ್ಪ ಕೆ

Upayuktha
0

 

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಅನ್ನುವಂಥದ್ದು ಪ್ರತಿಯೊಬ್ಬ ವಿದ್ಯಾರ್ಥಿ ಸ್ವಯಂಸೇವಕರಲ್ಲಿ ಸ್ವಪ್ರಜ್ಞೆಯನ್ನು ಮೂಡಿಸುತ್ತದೆ. ಗಾಂಧೀಜಿಯವರ ಜನ್ಮಶತಾಬ್ದಿಯನ್ನು ಆರಂಭವಾದ ಯೋಜನೆ ಸಮಾಜದಲ್ಲಿ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೂ ಇದು ಸಹಕಾರಿಯಾಗಿದೆ ಎಂದು ಮಂಗಳೂರಿನ ಡಾ. ಪಿ ಸತೀಶ್ ಪೈ , ಪಿ. ದಯಾನಂದ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ 19 ನೋಡಲ್ ಅಧಿಕಾರಿ ಡಾ. ಶೇಷಪ್ಪ ಕೆ. ಹೇಳಿದರು.


ಅವರು ವಿವೇಕಾನಂದ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ (ಎನ್‌ಎಸ್‌ಎಸ್) ಆಯೋಜಿಸಿದ ಮಾಹಿತಿ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶನಿವಾರ ಮಾತನಾಡಿದರು.


ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿ, ಎನ್‌ಎಸ್‌ಎಸ್ ನ ಪ್ರಾಮುಖ್ಯತೆಯನ್ನು ತಿಳಿಸಿದರು.


ಪ್ರಸ್ತಾವನೆಗೈದ ವಿವೇಕಾನಂದ ಪದವಿ ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಶ್ರೀನಾಥ್, ವಿವೇಕಾನಂದ ಕಾಲೇಜಿನ ಎನ್.ಎಸ್.ಎಸ್ ಘಟಕವು ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು , ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ ಎಂದು ಕಾಲೇಜಿನ ಎನ್‌ಎಸ್‌ಎಸ್ ಘಟಕದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.


ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಶೋಭಾ ಕೊಳತ್ತಾಯ, ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್.ಕೆ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್ ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರಾದ ಸೌಜನ್ಯ ಸ್ವಾಗತಿಸಿ, ವರುಣ್ ವಂದಿಸಿದರು. ಅರ್ಚನ ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top