||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರ್ನಾಟಕ ಬಂದ್ ವಾಪಸ್ ಪಡೆದ ಕನ್ನಡಪರ ಸಂಘಟನೆಗಳು

ಕರ್ನಾಟಕ ಬಂದ್ ವಾಪಸ್ ಪಡೆದ ಕನ್ನಡಪರ ಸಂಘಟನೆಗಳು

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ಮಾಡಲು ಕರೆ ನೀಡಿದ್ದ ಕನ್ನಡಪರ ಸಂಘಟನೆಗಳು ತಮ್ಮ ನಿರ್ಧಾರ ಬದಲಿಸಿವೆ. 

ಕನ್ನಡ ಚಳುವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಂ.ಇ.ಎಸ್ ಬ್ಯಾನ್ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಸಿಎಂ ಕಾಲಾವಕಾಶ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ನ್ನು ವಾಪಾಸ್ ಪಡೆಯಲಾಗುತ್ತಿದೆ. ಆದರೆ ಈ ವಿಚಾರದಲ್ಲಿ ನಾವು ರಾಜಿಯಾಗಲು ಸಾಧ್ಯವೇ ಇಲ್ಲ. ಮುಖ್ಯಮಂತ್ರಿ ಭರವಸೆಯ ಹಿನ್ನೆಲೆಯಲ್ಲಿ ಬಂದ್ ನಿಂದ ಹಿಂದೆ ಸರಿದಿದ್ದೇವೆ. ನಮ್ಮ  ಬೇಡಿಕೆಯನ್ನು ಸರ್ಕಾರ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ  ಬಂದ್ ಆಚರಿಸಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದರು.

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟವನ್ನು ಸುಟ್ಟಿರುವುದು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ, ಬಸವೇಶ್ವರರ ಭಾವಚಿತ್ರಕ್ಕೆ ಸೆಗಣಿ ಬಳಿದಿರುವುದನ್ನು ಖಂಡಿಸಿ ಬಂದ್ ಗೆ ಕರೆ ನೀಡಲಾಗಿತ್ತು. ಆದರೆ ಜನರು ಸಂಕಷ್ಟದಲ್ಲಿರುವುದರಿಂದ ಕರ್ನಾಟಕ ಬಂದ್ ಕೈ ಬಿಡಬೇಕು ಎಂದು ಸಿ.ಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಕನ್ನಡ ಪರ ಸಂಘಟನೆಗಳಲ್ಲಿ ಮನವಿ ಮಾಡಿದರು. ಇದಕ್ಕೆ ಒಪ್ಪಿ ಇದೀಗ ಬಂದ್ ನ್ನು ಹಿಂತೆಗೆದುಕೊಂಡಿದ್ದಾರೆ.

ನನ್ನ ಮನವಿಯನ್ನು ಮನ್ನಿಸಿ ಹೋರಾಟಗಾರರು ಬಂದ್ ನ್ನು ವಾಪಸ್ ಪಡೆದಿದ್ದಾರೆ. ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಧನ್ಯವಾದಗಳು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.0 Comments

Post a Comment

Post a Comment (0)

Previous Post Next Post