ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಭೆ ನಡೆಯಿತು. ಡಿಸೆಂಬರ್ 28 ರಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ನೀಡಿದೆ.
ಸಿ.ಎಂ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ ಅಂತ ತಿಳಿಸಿದ್ದಾರೆ.
ಇನ್ನು ಹೋಟೆಲ್ ಗಳಲ್ಲಿ ಶೇಕಡ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ನೈಟ್ ಕರ್ಫ್ಯೂ ಜಾರಿಯಾದ ಬಳಿಕ ಸಭೆ- ಸಮಾರಂಭಗಳಿಗೂ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ನೈಟ್ ಕರ್ಫ್ಯೂ ವೇಳೆ ತುರ್ತು ಸೇವೆಗಳಲ್ಲಿ ಯಾವುದೇ ವ್ಯತ್ಯಯವಿಲ್ಲ. ರಾತ್ರಿ ಪಾಳಿಯ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಸರಕು ಸಾಗಣೆ ವಾಹನಗಳಿಗೆ ಯಾವುದೇ ರೀತಿಯ ಅಡ್ಡಿಯಿಲ್ಲ. ಆನ್ಲೈನ್ ಡೆಲಿವರಿಗೆ ಈ ಸಂದರ್ಭದಲ್ಲಿ ನಿರ್ಬಂಧವಿರುವುದಿಲ್ಲ.