|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ- ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ- ಶಿಕ್ಷಣ ಸಚಿವ ಬಿ.ಸಿ ನಾಗೇಶ್


ಬೆಂಗಳೂರು: ಮುಂದಿನ ವರ್ಷಗಳಲ್ಲಿ ಪೂರ್ವ ಪ್ರಾಥಮಿಕ ಹಂತದಲ್ಲಿ ಸ್ವಲ್ಪ ಬದಲಾವಣೆ ತಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಲ್ಲಿ ಪೂರ್ವ, ಪ್ರಾಥಮಿಕ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಮುಂದಿನ 5 ವರ್ಷದಲ್ಲಿ ಈ ನೀತಿಗೆ ಒಳಪಡುವ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಲಾಗಿದೆ. ಇದಕ್ಕೆ ಅಗತ್ಯವಾದ ಪಠ್ಯಕ್ರಮ ರಚನೆ ಕಾರ್ಯ ಶೀಘ್ರದಲ್ಲಿ ಆರಂಭವಾಗಲಿದೆ " ಎಂದು ಅವರು ಹೇಳಿದರು.


"ಈ ವಿಚಾರದ ಕುರಿತು 26 ಉಪ ಸಮಿತಿಗಳು ಡಿಸೆಂಬರ್ ಅಂತ್ಯದಲ್ಲಿ ವರದಿಯನ್ನು ನೀಡಲಿದ್ದು ಇದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಎನ್.ಇ.ಪಿ ನೀತಿಯ ಸಾಧಕ ಭಾಧಕಗಳ ಬಗ್ಗೆಯೂ ಚಿಂತನೆ ನಡೆಸುತ್ತೇವೆ.ಇದರ ಬಗ್ಗೆ ನಾವು ಗಂಭೀರವಾಗಿ ಚರ್ಚೆ ನಡೆಸುತ್ತೇವೆ" ಎಂದು ಹೇಳಿದರು.

0 Comments

Post a Comment

Post a Comment (0)

Previous Post Next Post