ಶುಲ್ಕ ವಿನಾಯಿತಿ ಬೇಕಿದ್ದರೆ ಕೂಡಲೇ ಬ್ಯಾಂಕ್ ಖಾತೆ- ಆಧಾರ್ ಲಿಂಕ್ ಮಾಡಿಸಿ

Upayuktha
0

 

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ಈಗಾಗಲೇ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತವೂ ಮಂಜೂರಾಗಿದೆ.


ಆದರೆ, ಕೆಲವೊಂದು ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತ ಮಂಜೂರಾಗಿದ್ದು, ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ, ಮಂಜೂರಾದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲು ಅಡಚಣೆ ಉಂಟಾಗಿದೆ. ಇಂತಹ ವಿದ್ಯಾರ್ಥಿಗಳು ಕೂಡಲೇ ಸಂಬಂಧಪಟ್ಟ ಬ್ಯಾಂಕ್‍ಗಳನ್ನು ಸಂಪರ್ಕಿಸಿ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿ, ಎನ್‍ಪಿಸಿಐ (NPCI) ನಲ್ಲಿ ಮ್ಯಾಪಿಂಗ್ ಮಾಡಿಸಬೇಕು.


ಆಧಾರನಲ್ಲಿ ನಮೂದಾಗಿರುವ ಹೆಸರು (Adhar Name Miss Match) ಹೊಂದಾಣಿಕೆ ಆಗಿರುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿರುವಂತೆ ಆಧಾರ್ ಕಾರ್ಡ್‍ನಲ್ಲಿಯೂ ಕೂಡ ತಮ್ಮ ಹೆಸರನ್ನು ತಿದ್ದುಪಡಿ ಮಾಡಿಸಬೇಕು. ತಪ್ಪಿದ್ದಲ್ಲಿ ಅವರಿಗೆ ಮಂಜೂರಾಗಿರುವ ಶುಲ್ಕ ವಿನಾಯಿತಿ ಮೊತ್ತವು ತನ್ನಿಂತಾನೆ ರದ್ದಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top